ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಜೆಸಿಐಟಿಯಲ್ಲಿ ಎನ್‌ಸಿಸಿ ಸರ್ಟಿಫಿಕೆಟ್ ಪರೀಕ್ಷೆ

Last Updated 18 ಫೆಬ್ರುವರಿ 2020, 11:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಹೊರವಲಯದ ಶ್ರೀಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ತಾಂತ್ರಿಕ ಸಂಸ್ಥೆಯಲ್ಲಿ (ಎಸ್‌ಜೆಸಿಐಟಿ) ಇದೇ ಮೊದಲ ಬಾರಿಗೆ 2019-20ನೇ ಸಾಲಿನ ಎನ್‌ಸಿಸಿ ‘ಬಿ’ ಸರ್ಟಿಫಿಕೆಟ್ ಪರೀಕ್ಷೆ ಆಯೋಜಿಸಲಾಗಿತ್ತು.

ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸುಮಾರು 15 ಕಾಲೇಜುಗಳ 283 ಕೆಡೆಟ್‌ಗಳು ಭಾಗವಹಿಸಿದ್ದರು. ಫೆ.23 ರಂದು ಎಸ್‌ಜೆಸಿಐಟಿಯಲ್ಲಿಯೇ ಎನ್‌ಸಿಸಿ ‘ಸಿ’ ಪ್ರಮಾಣಪತ್ರ ಪರೀಕ್ಷೆ ಕೂಡ ನಡೆಯಲಿದೆ. ಈ ಪರೀಕ್ಷೆಗೆ 100 ಕೆಡೆಟ್‌ಗಳು ಹಾಜರಾಗಲಿದ್ದಾರೆ.

ಈ ಹಿಂದೆ ಜಿಲ್ಲೆಯ ಎಸ್‌ಸಿಸಿ ಕೆಡೆಟ್‌ಗಳೆಲ್ಲ ಪರೀಕ್ಷೆಗಾಗಿ ಬೆಂಗಳೂರಿಗೆ ಹೋಗಬೇಕಿತ್ತು. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇದೇ ಮೊದಲ ಬಾರಿ ಜಿಲ್ಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT