ಸೋಮವಾರ, ಜುಲೈ 13, 2020
29 °C

ನಿಮ್ಮಕಾಯಲಹಳ್ಳಿ ದರ್ಗಾ: ಆಡಳಿತಾಧಿಕಾರಿ ನೇಮಕಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ತಾಲ್ಲೂಕಿನ ನಿಮ್ಮಕಾಯಲಹಳ್ಳಿ ದರ್ಗಾಗೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಸದಸ್ಯ ಹಾಜಿ ಅನ್ಸರ್ ಖಾನ್ ಒತ್ತಾಯಿಸಿದ್ದಾರೆ.

ದರ್ಗಾದ ಸಮೀಪದ ಖಬರಸ್ಥಾನಕ್ಕೆ ತಡೆಗೋಡೆ ನಿರ್ಮಾಣಕ್ಕೆ ವಕ್ಫ್ ಮಂಡಳಿಯಿಂದ ₹ 5 ಲಕ್ಷ ಬಿಡುಗಡೆಯಾಗಿತ್ತು. ದರ್ಗಾ ಮಂಡಳಿ ಅಧ್ಯಕ್ಷರು ಕಾಮಗಾರಿ ಮಾಡದೆ ಹಣ ಡ್ರಾ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ. ಜಿಲ್ಲಾ ವಕ್ಫ್ ಮಂಡಳಿ ನೋಟಿಸ್‌ ನೀಡಿದ ನಂತರ ಹಣವನ್ನು ಬ್ಯಾಂಕ್‌ಗೆ ಮರುಪಾವತಿ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷರು ಬ್ಯಾಂಕ್‌ನಿಂದ ಹಣ ಡ್ರಾ ಮಾಡಿದರೂ, ತಡೆಗೋಡೆ ಏಕೆ ನಿರ್ಮಿಸಿಲ್ಲ. ದರ್ಗಾ ಆಡಳಿತ ಮಂಡಳಿ ಯಾವುದೇ ಅಭಿವೃದ್ಧಿ ಕೆಲಸ ಕೈಗೊಂಡಿಲ್ಲ. ದರ್ಗಾ ಸುತ್ತಮುತ್ತ ಸ್ವಚ್ಛತೆ ಕಾಪಾಡುತ್ತಿಲ್ಲ ಎಂದು ಟೀಕಿಸಿದರು.

ದರ್ಗಾ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿದೆ. ಆಡಳಿತಾಧಿಕಾರಿ ನೇಮಿಸಿ ನಂತರ ಉತ್ತಮ ಹಾಗೂ ಕ್ರಿಯಾಶೀಲ ಆಡಳಿತ ಮಂಡಳಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.