‘ಪ್ರಜಾವಾಣಿ’ ವರದಿ ಪ್ರಸ್ತಾಪ
ಗೌರಿಬಿದನೂರು ನಗರದ ಇಡಗೂರು ರಸ್ತೆಯಲ್ಲಿರುವ ಆದರ್ಶ ಶಾಲೆಯಲ್ಲಿನ ಅವ್ಯವಸ್ಥೆ ಕುರಿತು ‘ಪ್ರಜಾವಾಣಿ’ ನವೆಂಬರ್ 11ರಂದು ಪ್ರಕಟಿಸಿದ್ದ ವರದಿಯನ್ನು ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಅವರು ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದರು.
ಆದರ್ಶ ಶಾಲೆ ಬಗ್ಗೆ ಹೆಚ್ಚು ದೂರುಗಳು ಬರುತ್ತಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಬೇಕು ಎಂದು ಬಿಇಒ ಗಂಗರೆಡ್ಡಿಗೆ ಸೂಚನೆ ನೀಡಿದರು.
ಇದಕ್ಕೆ ಉತ್ತರಿಸಿದ ಬಿಇಒ ಗಂಗರೆಡ್ಡಿ, ಶಾಲಾ ಮುಖ್ಯಸ್ಥರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. 2–3 ದಿನಗಳಲ್ಲಿ ಶಾಲೆಗೆ ಭೇಟಿ ನೀಡಿ, ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗುವುದು. ಗುಂಪುಗಾರಿಕೆ ಮಾಡಿ ಗೊಂದಲ ಸೃಷ್ಟಿಸುತ್ತಿರುವವರಿಗೂ ಎಚ್ಚರಿಕೆ ನೀಡಲಾಗುವುದು ಎಂದರು.