ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಕೊರೊನಾ: 64ಕ್ಕಿಳಿದ ಸಕ್ರಿಯ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬುಧವಾರ ಸಕ್ರಿಯ ಸೋಂಕಿತರ ಸಂಖ್ಯೆ 64ಕ್ಕೆ ಇಳಿದಿದೆ. 10 ಜನರಿಗೆ ಸೋಂಕು ದೃಢವಾಗಿದ್ದರೆ 30 ರೋಗಿಗಳು ಗುಣವಾಗಿದ್ದಾರೆ.

ಬಾಗೇಪಲ್ಲಿ ತಾಲ್ಲೂಕಿನ ಒಬ್ಬರು, ಚಿಂತಾಮಣಿ ಐದು ಮತ್ತು ಶಿಡ್ಲಘಟ್ಟ ತಾಲ್ಲೂಕಿನ ನಾಲ್ಕು ಮಂದಿಗೆ ಸೋಂಕು ದೃಢವಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಏಳು, ಬಾಗೇಪಲ್ಲಿ ಇಬ್ಬರು, ಚಿಂತಾಮಣಿ ಐದು, ಗೌರಿಬಿದನೂರು ನಾಲ್ಕು, ಗುಡಿಬಂಡೆಯ ಒಬ್ಬರು ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಹನ್ನೊಂದು ರೋಗಿಗಳು
ಗುಣವಾಗಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಪ್ರಮಾಣ ಶೇ 0.22ರಷ್ಟಿದೆ. ಗುಣವಾಗುವವರ ಪ್ರಮಾಣ ಶೇ 98.88ರಷ್ಟಿದೆ.

ಬುಧವಾರ ಜಿಲ್ಲೆಯಲ್ಲಿ 4,480 ಜನರ ಗಂಟಲು ಸ್ರಾವ ಮಾದರಿಯನ್ನು ಸಂಗ್ರಹಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.