ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಓಬವ್ವ ಆದರ್ಶ ಪಾಲಿಸಿ’

ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅಭಿಮತ
Last Updated 12 ನವೆಂಬರ್ 2022, 4:51 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ವತಿಯಿಂದ ದಾಸಶ್ರೇಷ್ಠ ಕನಕರ ಮತ್ತು ವೀರರಾಣಿ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮ ನಡೆಯಿತು.

ತಹಶೀಲ್ದಾರ್ ಬಿ.ಎಸ್. ರಾಜೀವ್ ಮಾತನಾಡಿ, ಕನಕರ ಹಾಗೂ ಒನಕೆ ಓಬವ್ವ ಅವರು ಮಹಾನ್ ಆದರ್ಶ ವ್ಯಕ್ತಿಗಳಾಗಿದ್ದು, ಅವರ ಜೀವನ ಅರಿಯುವ ಮೂಲಕ ಅವರ ಬದುಕಿನ ಸಂದೇಶ ಅಳವಡಿಸಿಕೊಳ್ಳೋಣ ಎಂದರು.

ಓಬವ್ವ ಅವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು. ಕನಕರು ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದವರಲ್ಲ. ಬದಲಿಗೆ ಎಲ್ಲ ಜಾತಿಗಳಿಗೆ ಬೇಕಾದವರು. 15 -16ನೇ ಶತಮಾನದಲ್ಲೇ ಜಾತಿ ವ್ಯವಸ್ಥೆ ವಿರುದ್ಧ ಸಮರ ಸಾರಿದವರು. ಕನಕ ಭವನ ಮತ್ತು ಛಲವಾದಿ ಸಂಘಕ್ಕೆ ಸ್ಥಳ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕುರುಬ ಸಮುದಾಯದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಛಲವಾದಿ ಸಂಘದಿಂದ ಹಿರಿಯರಿಗೆ ಸನ್ಮಾನ ನಡೆಯಿತು. ಕನಕರ ಹಾಗೂ ಓಬವ್ವ ಅವರ ಜೀವನ ಕುರಿತು ಉಪನ್ಯಾಸ ನಡೆಯಿತು.

ತಾಲ್ಲೂಕು ಪಂಚಾಯಿತಿ ಇಒ ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಎ. ನಾಗರಾಜ್, ಕುರುಬರ ಸಂಘದ ಅಧ್ಯಕ್ಷ ಕೆ. ಮಂಜುನಾಥ್, ಕಾರ್ಯದರ್ಶಿ ಎಂ. ರಾಮಾಂಜಿ, ಗೌರವಾಧ್ಯಕ್ಷ ಎಂ. ಗಣೇಶಪ್ಪ, ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ತಾದೂರು ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್. ಅನಂತಕೃಷ್ಣ, ಛಲವಾದಿ ಸಂಘದ ತ್ಯಾಗರಾಜ್, ಗ್ಯಾಸ್ ನಾಗರಾಜ್, ಶೆಟ್ಟಹಳ್ಳಿ ಮೂರ್ತಿ, ನಾಗಣ್ಣ, ಮುನಿಕೃಷ್ಣಪ್ಪ, ಶ್ರೀನಿವಾಸ್, ಬೋದಗೂರು ಬಾಬು, ಮೇಲೂರು ಗುಂಡಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT