ಚಿಂತಾಮಣಿ: ತಾಲ್ಲೂಕಿನ ಕುರುಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಕಲ್ ಗ್ರಾಮದಲ್ಲಿ ಸಾಲ ಬಾಧೆಯಿಂದ ಶುಕ್ರವಾರ ರಾತ್ರಿ ರೈತರೊಬ್ಬರು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಮುನಿರಾಜು (40) ಆತ್ಮಹತ್ಯೆ ಮಾಡಿಕೊಂಡ ರೈತ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಕೃಷಿಯಿಂದ ಜೀವನ ನಡೆಸುತ್ತಿದ್ದರು. ಬೆಳೆ ಕೈಕೊಟ್ಟಿದ್ದರಿಂದ ಕಂಗಾಲಾಗಿದ್ದರು. ಎರಡು ಕೊಳವೆಬಾವಿ ಕೊರೆಯಿಸಿ 5 ಎಕರೆ ಪ್ರದೇಶದಲ್ಲಿ ಟೊಮೆಟೊ ಮತ್ತಿತರ ಬೆಳೆ ಬೆಳೆದಿದ್ದರು. ಬೆಲೆ ಕುಸಿತದಿಂದ ಸಾಲದ ಸುಳಿಗೆ ಸಿಲುಕಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇತ್ತೀಚೆಗೆ ಹೈನುಗಾರಿಕೆ ಉಪಕಸುಬನ್ನಾಗಿ ಕೈಗೊಳ್ಳಲು ಸಾಲ ಮಾಡಿ ಎರಡು ಸೀಮೆ ಹಸು ಖರೀದಿ ಮಾಡಿದ್ದರು. ಸಾಲ, ಬಡ್ಡಿ ಸೇರಿ ಸುಮಾರು ₹ 20 ಲಕ್ಷ ಸಾಲವಿತ್ತು ಎನ್ನಲಾಗಿದೆ.
ಈ ಬಗ್ಗೆ ಮೃತರ ಪತ್ನಿ ಜಯಲಕ್ಷ್ಮಮ್ಮ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.