ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

Last Updated 14 ಆಗಸ್ಟ್ 2020, 16:47 IST
ಅಕ್ಷರ ಗಾತ್ರ

ಗೌರೀಬಿದನೂರು: ತಾಲ್ಲೂಕಿನ ಡಿ.ಪಾಳ್ಯ ಹೋಬಳಿಯ ಚಿಂಚಾನಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ.

ಗ್ರಾಮದ ಸಮೀಪ ಇರುವ ಆನೆ ಕಂಬರಾಯ ದೇವಾಲಯದ ಆವರಣದಲ್ಲಿ ರಾಮಚಂದ್ರಪುರದ ಯುವಕನೊಂದಿಗೆ ಗುರುವಾರ ಬಾಲ್ಯವಿವಾಹಕ್ಕೆ ತಯಾರಿ ನಡೆಸಲಾಗುತ್ತಿತ್ತು. ಈ ಕುರಿತು ಮಕ್ಕಳ ಸಹಾಯವಾಣಿಗೆ ಮಾಹಿತಿ ಬಂದ ಕಾರಣ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಮದ್ ಉಸ್ಮಾನ್, ಅಂಗನವಾಡಿ ಮೇಲ್ವಿಚಾರಕಿ ಪುಷ್ಪಲತಾ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಅಮ್ಮಾಜಾನ್ ಭೇಟಿ ನೀಡಿ ವಿವಾಹವನ್ನು ತಡೆದಿದ್ದಾರೆ.

ಪೋಷಕರಿಗೆ ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳು ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಮನದಟ್ಟು ಮಾಡಿ ವಿವಾಹವನ್ನು ನಿಲ್ಲಿಸಲಾಗಿದೆ ಎಂದು ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT