ಚಿಕ್ಕಬಳ್ಳಾಪುರ: ‘ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಅಲ್ಲಿಯೇ ವಾಸ್ತವ್ಯ ಮಾಡಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ಅ. 1ರಿಂದ ಇಲ್ಲಿ ವಾಸ್ತವ್ಯ ಇರದ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದು. ಈ ವಿಷಯದಲ್ಲಿ ರಾಜಿ ಪ್ರಶ್ನೆ ಇಲ್ಲ’ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕೋವಿಡ್- 19 ನಿಯಂತ್ರಣ ವಿಷಯದಲ್ಲಿ ಬೂತ್ಮಟ್ಟದಲ್ಲಿ ರಚಿಸಿರುವ ಕಾರ್ಯಪಡೆಗಳು ಪರಿಣಾಮ ಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪ್ರತಿದಿನ ಡೆತ್ ಆಡಿಟ್ ಮಾಡಬೇಕು. ಇದರಿಂದ ಸಾವಿನ ಕಾರಣಗಳನ್ನು ತಿಳಿದು ಕೊಳ್ಳಲು ಸಾಧ್ಯವಾಗುತ್ತದೆ.
ಕೋವಿಡ್ಯೇತರ ಡೆಂಗಿ ಸಹಿತ ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಗಮನಹರಿಸಬೇಕು. ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಒಟ್ಟು 98 ಡಯಾಲಿಸಿಸ್ ರೋಗಿಗಳಿದ್ದಾರೆ. ಅವರಿಗೆ ಸರಿಯಾಗಿ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಒಂದು ಡಯಾಲಿಸಿಸ್ ಯಂತ್ರ ಅಳವಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳಿಗೆ ಚುಚ್ಚುಮದ್ದು ನೀಡಿಕೆಯಲ್ಲಿ ಯಾವುದೇ ಲೋಪ ಆಗಬಾರದು. ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ಮೂಲಕ ನೀಡಿದ ₹3 ಸಾವಿರ ಭತ್ಯೆ ಪೂರ್ಣ ಪ್ರಮಾಣದಲ್ಲಿ ವಿತರಣೆ ಆಗಿರುವ ಬಗ್ಗೆ ವರದಿ ನೀಡಿ ಎಂದು ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.