ಸೋಮವಾರ, ನವೆಂಬರ್ 18, 2019
22 °C

ಡಿಪ್ಲೊಮಾ ತರಗತಿಗಳ ಉದ್ಘಾಟನೆ

Published:
Updated:
Prajavani

ಚಿಕ್ಕಬಳ್ಳಾಪುರ: ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ಪ್ರಥಮ ವರ್ಷದ ಡಿಪ್ಲೊಮಾ ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಡಿಪ್ಲೊಮಾ ಶಿಕ್ಷಣದಿಂದ ಜೀವನದ ಉತ್ತುಂಗ ಸ್ಥಿತಿ ತಲುಪುವ ಮಾರ್ಗದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬಿಜಿಎಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಎನ್.ಶಿವರಾಮರೆಡ್ಡಿ ಮಾತನಾಡಿ ಬಿಜಿಎಸ್ ಕಾಲೇಜು ಶೈಕ್ಷಣಿಕವಾಗಿ ಮುನ್ನೆಡೆಯುತ್ತಿರುವ ಹಾದಿ ಹಾಗು ಹೆಚ್ಚು ಫಲಿತಾಂಶವನ್ನು ಪಡೆಯುತ್ತಿರುವ ಬಗ್ಗೆ ವಿವರಿಸಿ, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹಿತವಚನ ಹೇಳಿದರು.

ಆದಿಚುಂಚನಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಆರ್.ಲತಾ, ಉಪ ವಿಭಾಗಾಧಿಕಾರಿ ರಘುನಂದನ್, ಎಸ್‌ಜೆಸಿಐಟಿ ಪ್ರಾಂಶುಪಾಲ ರವಿಕುಮಾರ್, ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರೋ. ಪಿ.ಸಿ.ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)