ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

Last Updated 1 ಡಿಸೆಂಬರ್ 2020, 3:20 IST
ಅಕ್ಷರ ಗಾತ್ರ

ಗುಡಿಬಂಡೆ: ‘ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಬಡಜನರಿಗೆ ಉಚಿತವಾಗಿ ನೀರು ನೀಡುತ್ತಿರುವುದು ಶ್ಲಾಘನೀಯ. ಇಂತಹ ಒಳ್ಳೆಯ ಕಾರ್ಯಕ್ರಮಗಳಿಗೆ ನಾನು ಪ್ರೋತ್ಸಾಹ ನೀಡುತ್ತೇನೆ’ ಎಂದು ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಪಟ್ಟಣದ 5ನೇ ವಾರ್ಡ್‌ನ ತಿರುಮಲನಗರದ ಮಸೀದಿಯಲ್ಲಿ ಮದೀನಾ ಮಸ್ಜಿದ್ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ₹ 15 ಲಕ್ಷ ವೆಚ್ಚದಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.

ಈ ಭಾಗದಲ್ಲಿ ಫ್ಲೋರೈಡ್‌ ಸಮಸ್ಯೆ ಹೆಚ್ಚಾಗಿದೆ. ಜನರು ಈ ನೀರು ಕುಡಿದು ಹಲವು ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ತಿರುಮಲನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಜನರು ಇದ್ದಾರೆ. ಇಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ನಿಜಕ್ಕೂ ಸಂತೋಷದ ವಿಷಯ ಎಂದರು.

ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ಮದೀನಾ ಮಸ್ಜಿದ್ ಚಾರಿಟೇಬಲ್ ಟ್ರಸ್ಟ್ ಬಡವರ ಬಗ್ಗೆ ಕಾಳಜಿವಹಿಸಿ ಉತ್ತಮ ಕೆಲಸ ಮಾಡುತ್ತಿದೆ. ಇದರಂತೆ ಸಂಘ– ಸಂಸ್ಥೆಗಳು ಮುಂದೆ ಬರಬೇಕು. ಇಂತಹ ಕಾರ್ಯಗಳಿಗೆ ಸಹಕಾರ ನೀಡಲು ಸದಾ ಸಿದ್ಧ ಎಂದು ತಿಳಿಸಿದರು.

ಟ್ರಸ್ಟ್‌ ಅಧ್ಯಕ್ಷ ಸೈಯದ್ ಮುನೀರ್ ಮಾತನಾಡಿ, ತಿರುಮಲನಗರದ ಅಭಿವೃದ್ಧಿಯ ದೃಷ್ಟಿಯಿಂದ ಮಸೀದಿ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲಾಗಿದೆ. ಲಾಕ್‌ಡೌನ್ ಸಮಯದಲ್ಲಿ 500ಕ್ಕೂ ಹೆಚ್ಚು ಆಹಾರ ಕಿಟ್‌ ವಿತರಣೆ ಮಾಡಲಾಗಿತ್ತು ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವೈ. ಸೈಯದ್ ಅಹಮದ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷ ಸೈಯದ್ ಮಸ್ಸೂರ್, ಪ.ಪಂ. ಮಾಜಿ ಅಧ್ಯಕ್ಷ ರಿಯಾಜ್ ಪಾಷ, ಮುಖಂಡರಾದಅಲ್ತಾಫ್ ಪಾಷ, ಅಮರನಾಥರೆಡ್ಡಿ, ರಮೇಶ್ ಬಾಬು, ಲಕ್ಷ್ಮೀಕಾಂತಮ್ಮ, ಚಾಂದ್ ಪಾಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT