ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗೇಪಲ್ಲಿ: ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ

ದುಶ್ಚಟ ತ್ಯಜಿಸಲು ಯುವಜನರಿಗೆ ಸಲಹೆ
Last Updated 14 ಫೆಬ್ರುವರಿ 2021, 2:55 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಯುವಕರು ದುಶ್ಚಟಗಳಿಂದ ದೂರ ಇರಬೇಕು. ಉತ್ತಮ ಆರೋಗ್ಯಕ್ಕೆ ಕ್ರೀಡೆ, ವ್ಯಾಯಾಮ, ಪ್ರಾಣಾಯಾಮ ಹಾಗೂ ದೈಹಿಕ ಕಸರತ್ತು ಮಾಡಬೇಕು ಎಂದು ಪುರಸಭಾ ಸದಸ್ಯೆ ವಿ. ವನಿತಾ ದೇವಿ ಕರೆ ನೀಡಿದರು.

ಪಟ್ಟಣದ ಜೂನಿಯರ್ ಕಾಲೇಜಿನ ಆಟದ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿವಿಡಿ ಸೂಪರ್ ಲೀಗ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಇಂದಿನ ಪರಿಸ್ಥಿತಿಯಲ್ಲಿ ಕೆಲವು ಯುವಕರು ಮಾದಕ, ಮದ್ಯಪಾನ, ಧೂಮಪಾನ ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹೆತ್ತವರು ಮಕ್ಕಳ ಮೇಲೆ ಅನೇಕ ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಪೋಷಕರ ಕನಸುಗಳಿಗೆ ತೊಂದರೆ ಮಾಡದಂತೆ ಯುವಕರು ಎಚ್ಚರವಹಿಸಬೇಕು ಎಂದರು.

ಶಾಲಾ, ಕಾಲೇಜುಗಳಿಗೆ ತಪ್ಪದೇ ಹಾಜರಾಗಬೇಕು. ವಿದ್ಯಾರ್ಥಿಗಳು ಓದದೇ ಅನುತ್ತೀರ್ಣಗೊಂಡು, ಅರ್ಧಕ್ಕೆ ಶಿಕ್ಷಣ ಬಿಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಉಜ್ವಲ ಭವಿಷ್ಯಕ್ಕಾಗಿ ವಿದ್ಯಾಭ್ಯಾಸದ ಅವಧಿಯಲ್ಲಿ ಉತ್ತಮವಾಗಿ ಓದಬೇಕು. ನವಸಮಾಜ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.

ಯುವಕರು ಪಾಠದ ಜೊತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಒಬ್ಬೊಬ್ಬರಲ್ಲಿ ಒಂದೊಂದು ಕಲೆ, ಕ್ರೀಡಾ ಪ್ರತಿಭೆ ಇರುತ್ತದೆ. ಅದನ್ನು ವೇದಿಕೆಗಳಲ್ಲಿ ಹಾಗೂ ಆಟೋಟಗಳಲ್ಲಿ ಪ್ರದರ್ಶನ ಮಾಡಬೇಕು. ತಾಲ್ಲೂಕು ಅತಿ ಹಿಂದುಳಿದ, ಗಡಿ ಪ್ರದೇಶವಾಗಿದೆ. ಇಲ್ಲಿನ ಕೆಲ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ. ಅನೇಕ ಮಹನೀಯರ, ಸಮಾಜ ಸಾಧಕರ ಆದರ್ಶಗಳನ್ನು ಯುವಕರು ಪಾಲಿಸಬೇಕು ಎಂದು ತಿಳಿಸಿದರು.

ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗವಹಿಸಿದ 10 ತಂಡಗಳ ನಾಯಕರು ಹಾಗೂ ಕ್ರೀಡಾಪಟುಗಳನ್ನು ಗಣ್ಯರು ಪರಿಚಯ ಮಾಡಿಕೊಂಡರು. ಗೂಳೂರು ನೇಹಾ ಸಂಸ್ಥೆ ಅಧ್ಯಕ್ಷ ಕೆ.ವಿ. ಪ್ರಶಾಂತ್ ಕುಮಾರ್, ವಕೀಲ ಶ್ರೀನಿವಾಸ್, ನರಹರಿ ಎಂಟರ್ ಪ್ರೈಸಸ್‌ನ ನರಸಿಂಹ ರೆಡ್ಡಿ, ಯುವ ಮುಖಂಡ ಸೋಮಶೇಖರ್, ಗೆಂಗಿರೆಡ್ಡಿ, ಆಯೋಜಕರಾದ ಸುಮುಖ್, ಸೃಜನ್, ವಿಕ್ರಂ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT