ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

Last Updated 22 ಫೆಬ್ರುವರಿ 2021, 4:11 IST
ಅಕ್ಷರ ಗಾತ್ರ

ಚಿಂತಾಮಣಿ: ‘ವಿದ್ಯಾವಂತ ಯುವಜನರು ಡಿಜಿಟಲ್ ಗ್ರಂಥಾಲಯದ ಉಪಯೋಗವನ್ನು ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ವಿ.ಮಂಜುನಾಥ್ ಸಲಹೆ ನೀಡಿದರು.

ತಾಲ್ಲೂಕಿನ ತಳಗವಾರ ಗ್ರಾಮ ಪಂಚಾಯಿತಿಯಲ್ಲಿ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾವಂತ ಯುವಕರು ಗ್ರಂಥಾಲಯಗಳಲ್ಲಿ ದಿನಪತ್ರಿಕೆ, ಕಾದಂಬರಿ, ಪುಸ್ತಕ, ಸ್ವರ್ಧಾತ್ಮಕ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಬೆಳಸಿಕೊಳ್ಳುತ್ತಿದ್ದರು. ಈಗ ಕಾಲ ಬದಲಾದಂತೆ ಆನ್‌ಲೈನ್ ಮೂಲಕ ವ್ಯಾಸಂಗ ಪುಸ್ತಕಗಳನ್ನು ಕಂಪ್ಯೂಟರ್‌ನಲ್ಲಿ ನೋಡಿ ಕಲಿತುಕೊಳ್ಳುವಂತಾಗಿದೆ. ತಾಲ್ಲೂಕಿನಲ್ಲಿ ತಳಗವಾರ ಗ್ರಾಮ ಪಂಚಾಯಿತಿಯಲ್ಲಿ ಮೊದಲ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳ ಜತೆಗೆ ಇತರರು ಇದನ್ನು ಬಳಸಿಕೊಳ್ಳುವ ಮೂಲಕ ತಮ್ಮ ಜಾನ ಹೆಚ್ಚಿಸಿಕೊಳ್ಳಬೇಕು’ ಎಂದು ನುಡಿದರು.

‘ನಗರಗಳಲ್ಲಿ ವಿದ್ಯಾರ್ಥಿಗಳು ಖಾಸಗಿ ಸೈಬರ್‌ನಲ್ಲಿ ಹೋಗಿ ಕಲಿಯುತ್ತಿದ್ದಾರೆ ಹಾಗೂ ಅವರಿಗೆ ಬೇಕಾಗಿರುವ ಅರ್ಜಿಗಳನ್ನು ಅಲ್ಲಿ ಸಲ್ಲಿಸುತ್ತಾರೆ. ನಗರದವರಂತೆ ಗ್ರಾಮೀಣ ಭಾಗದವರೂ ಪ್ರಸ್ತುತ ಸ್ವರ್ಧಾತ್ಮಕ ಪ್ರಪಂಚದಲ್ಲಿ ಹಿಂದುಳಿದಿದ್ದಾರೆ. ಗ್ರಾಮೀಣ ಭಾಗದವರ ಪ್ರತಿಭೆ ಹೊರತರಲು ಈ ಡಿಜಿಟಲ್ ಗ್ರಂಥಾಲಯ ಬಹಳ ಉಪಯುಕ್ತವಾಗಿದೆ’ ಎಂದರು.

‘ವಿಶೇಷವಾಗಿ ಐ.ಎ.ಎಸ್, ಐ.ಪಿ.ಎಸ್, ಯು.ಪಿ.ಎಸ್.ಸಿ, ಕೆ.ಪಿ.ಎಸ್.ಸಿ ಪರೀಕ್ಷೆಗಳಲ್ಲಿ ಸ್ವರ್ಧಿಸಲು ಈ ಗ್ರಂಥಾಲಯವು ಬಹಳ ಅಗತ್ಯವಾಗಿದೆ. ಇದನ್ನು ಬಳಸಿಕೊಂಡು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಉನ್ನತ ಹುದ್ದೆಯನ್ನು ಪಡೆಯಬಹುದು’ ಎಂದು ನುಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಆರ್.ಮಂಜುನಾಥ ಮಾತನಾಡಿ, ‘ಸರ್ಕಾರ ನೀಡಿರುವ ಡಿಜಿಟಲ್ ಗ್ರಂಥಾಲಯವನ್ನು ಪ್ರತಿಯೊಬ್ಬರೂ ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿರಿ. ಕಂಪ್ಯೂಟರ್ ಮೂಲಕ ಎಲ್ಲಾ ರೀತಿಯ ಮಾಹಿತಿಗಳನ್ನು ಪಡೆಯಬಹುದು’ ಎಂದರು.

ಉಪಾಧ್ಯಕ್ಷ ಶಿವಮ್ಮ. ಪಿ.ಡಿ.ಒ ಆರ್.ಸುಖಾಂತ್, ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT