ಬುಧವಾರ, ಏಪ್ರಿಲ್ 21, 2021
29 °C

ಅಫೀಮು ಮಾರಾಟ; ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದಲ್ಲಿ ಅಫೀಮು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಮೂಲದ ರಾಣಾ ಸಿಂಗ್ ಮತ್ತು ಜೋಧ್ ಸಿಂಗ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಗರದ 23ನೇ ವಾರ್ಡ್‌ನ ಚಾಮರಾಜಪೇಟೆಯ ಅವರ ಬಾಡಿಗೆ ನಿವಾಸದ ಮೇಲೆ ಡಿವೈಎಸ್‌ಪಿ ರವಿಶಂಕರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಬಂಧಿತರಿಂದ 360 ಗ್ರಾಂ ಅಫೀಮು ವಶಪಡಿಸಿಕೊಂಡಿದ್ದಾರೆ.

‘2003ರಿಂದ ಆರೋಪಿಗಳು ಚಿಕ್ಕಬಳ್ಳಾಪುರದಲ್ಲಿ ವಾಸಿಸುತ್ತಿದ್ದಾರೆ. ಪ್ಲಾಸ್ಟಿಕ್, ಬಟ್ಟೆ ಅಂಗಡಿಗಳನ್ನು ಇಟ್ಟುಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ’ ಎಂದು ರವಿಶಂಕರ್ ತಿಳಿಸಿದರು.

ಆರೋಪಿಗಳ ಮನೆಗೆ ನಿತ್ಯವೂ ಆರೇಳು ಮಂದಿ ಬರುತ್ತಿದ್ದರು. ಇವರು ಕಾಯಂ ಗ್ರಾಹಕರು ಎನಿಸುತ್ತದೆ. ಈ ದಾಳಿ ನಡೆದ ನಂತರವೇ ನಮಗೆ ಇವರು ಈ ಕೃತ್ಯ ನಡೆಸುತ್ತಿದ್ದಾರೆ ಎನ್ನುವುದು ತಿಳಿಯಿತು ಎಂದು ನೆರೆಹೊರೆಯವರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.