ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸೋಂಕಿತೆ ಅಂತ್ಯಕ್ರಿಯೆಗೆ ವಿರೋಧ

ಪ್ರಶಾಂತ್ ನಗರದಲ್ಲಿರುವ ಮುಸ್ಲಿಮರ ಸ್ಮಶಾನದ ಸುತ್ತಲಿನ ನಿವಾಸಿಗಳಿಂದ ಅಡ್ಡಿ, ಮನವೊಲಿಸಿದ ಅಧಿಕಾರಿಗಳು
Last Updated 17 ಜುಲೈ 2020, 16:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಕೋವಿಡ್‌ ಸೋಂಕಿತ ಮಹಿಳೆಯ ಅಂತ್ಯಕ್ರಿಯೆ ನಡೆಸಲು ಶುಕ್ರವಾರ ನಗರದ ಪ್ರಶಾಂತ್ ನಗರದಲ್ಲಿರುವ ಮುಸ್ಲಿಮರ ಸ್ಮಶಾನದ ಸುತ್ತಲಿನ ನಿವಾಸಿಗಳು ವಿರೋಧ ವ್ಯಕ್ತಪಡಿಸಿದರು.

ಕಾರ್ಖಾನೆ ಪೇಟೆ ರಸ್ತೆ ನಿವಾಸಿ, 56 ವಯಸ್ಸಿನ ಮಹಿಳೆ ಶುಕ್ರವಾರ ಬೆಳಿಗ್ಗೆ ಕೋವಿಡ್‌ ವಾರ್ಡ್‌ನಲ್ಲಿ ಮೃತಪಟ್ಟಿದ್ದರು. ಸರ್ಕಾರದ ಮಾರ್ಗಸೂಚಿ ಅನುಸಾರವೇ ಅವರ ಪ್ರಶಾಂತ್ ನಗರದಲ್ಲಿರುವ ಮುಸ್ಲಿಮರ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದರು.

ಈ ವಿಚಾರ ತಿಳಿಯುತ್ತಲೇ ಸ್ಥಳೀಯ ಜನರು ಸ್ಮಶಾನಕ್ಕೆ ಬಂದು ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದರು. ತಹಶೀಲ್ದಾರ್, ಉಪವಿಭಾಗಾಧಿಕಾರಿ ಸ್ಥಳಕ್ಕೆ ಬಂದು, ಜಿಲ್ಲಾಧಿಕಾರಿ ದೂರವಾಣಿ ಮೂಲಕ ಜನರಿಗೆ ಮನವಿ ಮಾಡಿದರೂ ಸಾರ್ವಜನಿಕರು ಅಂತ್ಯಕ್ರಿಯೆಗೆ ಒಪ್ಪಲಿಲ್ಲ.

ಕೊನೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಯೋಗೇಶ್‌ ಗೌಡ ಅವರು ಅಂತ್ಯಕ್ರಿಯೆ ವಿರೋಧಿಸುತ್ತಿದ್ದ ಜನರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT