ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿ ನಗರದಲ್ಲಿ ರೈಲು ತಡೆ ನಡೆಸಲು ರೈತರು ಪ್ರಯತ್ನಿಸಿದರು. ರೈಲು ತಡೆಗೆ ಮುಂದಾದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು.

ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘರ್ಷ ಸಮನ್ವಯ ಸಮಿತಿ ಕರೆಯ ಮೇರೆಗೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಪೊಲೀಸರು ಅಡ್ಡಗಟ್ಟಿದಾಗ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆಗಳನ್ನು ಕೂಡಲೇ ಹಿಂಪಡೆಯಬೇಕು. ಜೊತೆಗೆ, ಈಗಾಗಲೇ ಪೆಟ್ರೋಲ್, ಡೀಸೆಲ್, ಎಲ್ಪಿಜಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಕಷ್ಟ ಪಡುತ್ತಿದ್ದಾರೆ’ ಎಂದರು.

ಪ್ರಾಂತ ರೈತ ಸಂಘ, ಜಿಲ್ಲಾ ಕಾರ್ಯದರ್ಶಿ ಎಚ್.ಪಿ.ಲಕ್ಷ್ಮಿನಾರಾಯಣ, ಮಂಜುನಾಥರೆಡ್ಡಿ ಶ್ರೀರಾಮನಾಯ್ಕ, ವೆಂಕಟರಾಮ ರೆಡ್ಡಿ (ಪುಟ್ಟಣ್ಣಯ್ಯ ಬಣ) ವೆಂಕಟರಮಣಪ್ಪ, ಆನಂದರೆಡ್ಡಿ ವರದಪ್ಪ, ರಾಜ್ಯ ರೈತ ಸಂಘ (ನಂಜುಡಸ್ವಾಮಿ) ಬಣದ ಅಧ್ಯಕ್ಷ ಬಸವರಾಜಪ್ಪ, ಜಿಲ್ಲಾ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ, ಶ್ರೀನಿವಾಸ, ಸಿಐಟಿಯು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಜಿ.ಸಿದ್ದಗಂಗಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.