ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ

Last Updated 21 ಮೇ 2020, 10:42 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಬೇಕು ಹಾಗೂ ಕಂಪನಿಗಳ ಲೂಟಿಯಿಂದ ರೈತರನ್ನು ಮುಕ್ತಿಗೊಳಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷದ (ಮಾರ್ಕ್ಸ್‌ವಾದಿ) ತಾಲ್ಲೂಕು ಸಮಿತಿ ಸದಸ್ಯರು ತಹಶೀಲ್ದಾರ್ ಎಂ.ನಾಗರಾಜು ಅವರಿಗೆ ಮನವಿ ಸಲ್ಲಿಸಿದರು.

ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಮಹಮ್ಮದ್ ಅಕ್ರಂ ಮಾತನಾಡಿ, ಕಾರ್ಪೊರೇಟ್‌ ಸಂಸ್ಥೆಗಳಿಗೆ ಅನುಕೂಲ ಮಾಡಲು ಸರ್ಕಾರಗಳು ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ತರಲು ಹೊರಟಿವೆ. ರೈತರು ವಿರೋಧದ ನಡುವೆಯೂ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದರು.

ತಾಲ್ಲೂಕು ಸಿಪಿಎಂ ನಗರ ಸಮಿತಿ ಕಾರ್ಯದರ್ಶಿ ಅಶ್ವಥ್ಥಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಾಮನಾಯಕ್, ಸಿಐಟಿಯು ತಾಲ್ಲೂಕು ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಕಾರ್ಯದರ್ಶಿ ಮುಸ್ತಾಫ, ಮುಖಂಡರಾದ ಎಂ.ಎನ್.ರಘುರಾಮರೆಡ್ಡಿ, ಹೇಮಚಂದ್ರ, ರಾಮಲಿಂಗಪ್ಪ, ಜನವಾದಿ ಮಹಿಳಾ ಸಂಘದ ಜಿಲ್ಲಾ ಅಧ್ಯಕ್ಷೆ ಬಿ.ಸಾವಿತ್ರಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT