ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ 183 ಸರ್ಕಾರಿ ನೌಕರರಿಗೆ ಕಳೆದ ನಾಲ್ಕು ವರ್ಷಗಳಿಂದ ವೈದ್ಯಕೀಯ ವೆಚ್ಚದ ಬಿಲ್ ಪಾವತಿಯಾಗದೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ರವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚದ ಬಿಲ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ಕಾರಿ ನೌಕರರ ವೇತನ ಹಾಗೂ ಇತರೆ ಬಿಲ್‌ಗಳನ್ನು ಎಂಟು ದಿನಗಳ ಒಳಗೆ ಪಾತಿಸಲಾಗುತ್ತಿದೆ. ಆದರೆ ವೈದ್ಯಕೀಯ ವೆಚ್ಚದ ಬಿಲ್‌ಗಳು ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿ ಬಿದ್ದಿವೆ. ಯಾರೋ ಮಾಡಿರುವ ತಪ್ಪಿಗೆ ಯಾರೋ ಶಿಕ್ಷೆ ಅನುಭವಿಸುವಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ನೌಕರರು ಆರೋಗ್ಯದ ದೃಷ್ಟಿಯಿಂದ ಆರೋಗ್ಯ ವಿಮೆಯಲ್ಲಿ ಹಣ ಉಳಿತಾಯ ಮಾಡಿರುತ್ತಾರೆ. ಆದರೆ ಆ ಹಣ ಸರಿಯಾದ ಸಮಯಕ್ಕೆ ನೌಕರರಿಗೆ ತಲುಪಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಸರ್ಕಾರಿ ನೌಕರರ ವೈದ್ಯಕೀಯ ವೆಚ್ಚ ಬಿಲ್‌ಗಳನ್ನು ದುರುಪಯೋಗ ಪಡೆಸಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಮುಂದಿನ ದಿನಗಳಲ್ಲಿ ಆಯಾ ತಾಲ್ಲೂಕಿನಲ್ಲೇ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಬಿಲ್‌ಗಳ್ನು ವಿಳಂಬವಾಗದಂತೆ ನೀಡಲು ಕ್ರಮ ವಹಿಸಲಾಗುತ್ತದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್‌ನಿಂದ ಕೈಶುಚಿಗೊಳಿಸಿಕೊಳ್ಳಬೇಕು. ಈ ಬಗ್ಗೆ ಶಿಕ್ಷಕರು ಗಮನ ಹರಿಸಬೇಕು’ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಜಿ.ನಾಗೇಶ್, ವೃತ್ತ ನಿರೀಕ್ಷಕ ಸುದರ್ಶನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.