ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬದಲಾವಣೆ ಬಯಸಿದ ಚಿಕ್ಕಬಳ್ಳಾಪುರ ಜನರು’: ಕೆ.ಪಿ.ಬಚ್ಚೇಗೌಡ

Last Updated 25 ಜನವರಿ 2023, 5:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ಕ್ಷೇತ್ರದ ಜನರು ಈ ಬಾರಿ ಬದಲಾವಣೆಯನ್ನು ಬಯಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿನ ಸರ್ವಾಧಿಕಾರದ ಆಡಳಿತವನ್ನು ನಿರ್ಮೂಲನೆ ಮಾಡಲು ಇಚ್ಛಿಸಿದ್ದಾರೆ’ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ವಿವಿಧ ಕಡೆಗಳಲ್ಲಿ ಹಾಗೂ ಅಂದಾರ್ಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಮನೆ ಮನೆಗಳಿಗೆ ಭೇಟಿ ಅಭಿಯಾನ ನಡೆಸಿ ಅವರು ಮಾತನಾಡಿದರು.

ಕ್ಷೇತ್ರದ ಪ್ರತಿ ಮನೆ ಮನೆಗೂ ಖುದ್ದು ಭೇಟಿ ನೀಡುತ್ತಿದ್ದೇವೆ. ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರರ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತಿದ್ದೇವೆ. ಚಿಕ್ಕಬಳ್ಳಾಪುರದಲ್ಲಿ ಜನರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ನಡೆದಿದೆ. ವಿರೋಧ ಪಕ್ಷಗಳ ನಾಯಕರ ಮೇಲೆ ಪ್ರಕರಣಗಳನ್ನು ದಾಖಲಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಕೇವಲ ಜೆಡಿಎಸ್ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರೂ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜತೆಗೆ ಯಾರ ಮೇಲೆಯೂ ದ್ವೇಷ ಸಾಧಿಸಿಲ್ಲ. ನಮ್ಮದು ಪ್ರೀತಿಯ ರಾಜಕಾರಣ. ದ್ವೇಷದ ರಾಜಕಾರಣವಲ್ಲ ಎಂದು ಹೇಳಿದರು.

ಬುಧವಾರ ಚಿಕ್ಕಬಳ್ಳಾಪುರ ಹೂ ಮಾರುಕಟ್ಟೆಗೆ ಭೇಟಿ ನೀಡಲಾಗುವುದು. ಅಲ್ಲಿನ ರೈತರು, ವ್ಯಾಪಾರಿಗಳು ಮತ್ತು ಗ್ರಾಹಕರ ಜತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಮುನೇಗೌಡ, ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಸಿ.ರಾಜಾಕಾಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT