ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರಿ ಸಾಧನೆಗೆ ಪರಿಶ್ರಮ ಅಗತ್ಯ: ಪಿ.ಎನ್. ಶಿವಣ್ಣ

Last Updated 29 ಮೇ 2022, 4:39 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಬೆಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಚಿನ್ನದ ಪದಕ ಹಾಗೂ ರ‍್ಯಾಂಕ್‌ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ’ ಎಂದು ವಿಕಾಸ ಪದವಿಪೂರ್ವ ಮತ್ತುಪದವಿ ಕಾಲೇಜಿನ ಅಧ್ಯಕ್ಷ ಪಿ.ಎನ್. ಶಿವಣ್ಣತಿಳಿಸಿದರು.

ಪಟ್ಟಣದ ವಿಕಾಸ ಪದವಿ ಕಾಲೇಜಿನ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಿನ್ನದ ಪದಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಬೆಂಗಳೂರು ವಿಶ್ವವಿದ್ಯಾನಿಲಯ ಪ್ರಕಟಿಸಿದ 2020-21ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಡಿ. ಹರೀಶ್ ಸಮಾಜಶಾಸ್ತ್ರ ವಿಷಯದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ವಿದ್ಯಾರ್ಥಿನಿ ಎಂ.ಟಿ. ಅನುಷ 10ನೇ ರ‍್ಯಾಂಕ್‌ ಪಡೆದಿದ್ದಾರೆ ಎಂದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಪ್ರಕಟಿಸಿರುವ 2021-22ನೇ ಸಾಲಿನ ಬಿ.ಎ ಪದವಿಯಲ್ಲಿ ಎಚ್.ಎ. ನರೇಶ್ 4ನೇ ರ್‍ಯಾಂಕ್‌, ಆರ್. ಗಣೇಶ್ 5ನೇ ರ‍್ಯಾಂಕ್‌ ಗಳಿಸಿದ್ದಾರೆ. ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕನ್ನಡ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸತತ ಪರಿಶ್ರಮದಿಂದ ಅಭ್ಯಾಸ ಮಾಡಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಎನ್. ಕೃಷ್ಣಾರೆಡ್ಡಿ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಎನ್. ನಾರಾಯಣಸ್ವಾಮಿ, ವೈ. ಬೈಯಪ್ಪರೆಡ್ಡಿ, ವೆಂಕಟಸ್ವಾಮಿ, ಪ್ರಾಂಶುಪಾಲ ಟಿ.ಎನ್. ರವಿ, ಉಪನ್ಯಾಸಕರಾದ ರಮೇಶ್, ವೆಂಕಟಾಚಲಪತಿ, ಟಿ. ಶ್ರೀನಿವಾಸ್, ಚಂದ್ರಪ್ಪ, ಹನುಮೇಶ್, ಆರ್. ಶ್ರೀನಿವಾಸ್, ಸ್ವಾತಿ, ವೆಂಕಟರತ್ನಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT