ಭಾನುವಾರ, ಏಪ್ರಿಲ್ 11, 2021
32 °C

ಇಂದಿನಿಂದ 3ನೇ ಹಂತದ ಕೋವಿಡ್‌ ಲಸಿಕೆ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆ, ಜಿಲ್ಲೆಯ ಐದು ಸಾರ್ವಜನಿಕ ಆಸ್ಪತ್ರೆ ಹಾಗೂ ಎರಡು ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಹಂತದ ಕೋವಿಡ್‌ ಲಸಿಕೆ ಅಭಿಯಾನವನ್ನು ಇಂದಿನಿಂದ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಚಿಕ್ಕಬಳ್ಳಾಪುರದ ನಗರದ ಜಿಲ್ಲಾಸ್ಪತ್ರೆ, ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ ಮತ್ತು ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆ, ಗೌರಿಬಿದನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಹಾಗೂ ಚಿಕ್ಕಬಳ್ಳಾಪುರದ ಅನನ್ಯ ಸ್ಪೆಷಾಲಿಟಿ ಖಾಸಗಿ ಆಸ್ಪತ್ರೆ ಮತ್ತು ಚಿಂತಾಮಣಿಯ ಡೆಕ್ಕನ್ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಹಂತದ ಕೋವಿಡ್ ಲಸಿಕೆ ನೀಡಲಾಗುವುದು. ಲಸಿಕೆ ನೀಡಲು ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಾರ್ಚ್ 1ರಿಂದ 60 ವರ್ಷ ಮೇಲ್ಪಟ್ಟವರು, 45ರಿಂದ 59 ವರ್ಷದ ಒಳಗಿನ ಸಹ ಅಸ್ವಸ್ಥತೆ ಹೊಂದಿರುವವರಿಗೆ ಲಸಿಕೆಯನ್ನು ನೀಡಲಾಗುತ್ತದೆ. ಮೊದಲನೇ ಮತ್ತು ಎರಡನೇ ಹಂತದ ಲಸಿಕೆ ಅಭಿಯಾನದಲ್ಲಿ ಬಿಟ್ಟು ಹೋದ ಅಥವಾ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಸಹ ಈ ಹಂತದಲ್ಲಿ ಸೂಚಿತ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಲಸಿಕೆಯನ್ನು ಪಡೆಯಬಹುದು. ಎಲ್ಲ ಫಲಾನುಭವಿಗಳು ಲಸಿಕಾ ಕೇಂದ್ರಗಳಿಗೆ ಬರುವಾಗ ಆಧಾರ್ ಕಾರ್ಡ್, ಎಲೆಕ್ಷನ್ ಕಾರ್ಡ್ ಅನ್ನು ತರಬೇಕು. ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೆಲಸದ ಗುರುತಿನ ಚೀಟಿಯನ್ನು ತರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ ಕಬಾಡೆ ಅವರು ಮಾಹಿತಿ ನೀಡಿದರು.

ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವಾರದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಲಸಿಕೆಯನ್ನು ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸದ ದಿನಗಳಲ್ಲಿ ಲಸಿಕೆಯನ್ನು ನೀಡಲಾಗುವುದು. ಮಾರ್ಚ್ 1ರಿಂದ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಲಸಿಕೆ ನೀಡಲಾಗುವುದು. ಪ್ರತಿ ಲಸಿಕಾ ಕೇಂದ್ರಗಳಲ್ಲಿ 200 ಫಲಾನುಭವಿಗಳಿಗೆ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು