ಬುಧವಾರ, ಆಗಸ್ಟ್ 17, 2022
28 °C

ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸಲು ಎಲ್ಲರೂ ಕೈಜೋಡಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ಪ್ಲಾಸ್ಟಿಕ್‌ ಮುಕ್ತ ಪರಿಸರ ನಿರ್ಮಾಣ ಮಾಡಲು ನಾಗರಿಕರು ಹಾಗೂ ಅಧಿಕಾರಿಗಳೆಲ್ಲರೂ ಕೈಜೋಡಿಸಬೇಕು ಎಂದು ಸಿಇಒ ಪಿ.ಶಿವಶಂಕರ್ ಹೇಳಿದರು.

ಗ್ರಾಮೀಣ ಭಾಗದಲ್ಲಿ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮ ವಹಿಸಬೇಕು. ಪ್ರಾಥಮಿಕ ಹಂತದಲ್ಲೇ ಹಸಿ ಕಸ ಹಾಗೂ ಒಣ ಕಸವನ್ನಾಗಿ ಪ್ರತ್ಯೇಕವಾಗಿ ಬೇರ್ಪಸುವ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್ ಶುಕ್ರವಾರ ತಾಲ್ಲೂಕಿನ
ವಿವಿಧೆಡೆಗಳಲ್ಲಿ ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಮೊದಲಿಗೆ ವಾಟದಹೊಸಹಳ್ಳಿಯ ಎಸ್‍ಎಲ್‍ಡಬ್ಲ್ಯೂ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಘನ ತ್ಯಾಜ್ಯ ಘಟಕ ಕಾಮಗಾರಿ ಪರಿಶೀಲಿಸಿ, ಮುಂದಿನ ಜನವರಿ 26 ರೊಳಗೆ ಎಲ್ಲಾ ಘನ ತ್ಯಾಜ್ಯ ಘಟಕಗಳ ಕಾಮಗಾರಿ ಪೂರ್ಣಗೊಳಿಸಿ ಕಾರ್ಯಾರಂಭ ಮಾಡಬೇಕು ಎಂದು ತಾಲೂಕು ಕಾರ್ಯನಿರ್ವಹಣಾಧಿಕಾರಿ ಎನ್.ಮುನಿರಾಜು ರವರಿಗೆ ಸೂಚಿಸಿದರು.

ನಂತರ ಹೊಸೂರಿನಲ್ಲಿ ಆರಂಭಿಸಲಾಗಿರುವ ರಾಜೀವ್‍ಗಾಂಧಿ ಸೇವಾ ಕೇಂದ್ರದ ಕಾಮಗಾರಿ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಪರಿಶೀಲಿಸಿದರು. ಬಳಿಕ ಮುದ್ದಲೋಡು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಘನ ತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಪಿಡಿಒಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ತಾ.ಪಂ ಇಒ ಎನ್.ಮುನಿರಾಜು, ನರೇಗಾ ಸಹಾಯಕ ‌ನಿರ್ದೇಶಕ ಪಿ.ಚಿನ್ನಪ್ಪ, ಜಿಪಂ ಸದಸ್ಯರಾದ ಎಚ್.ವಿ.ಮಂಜುನಾಥ್, ಪಿಡಿಒ ಬಾಲಕೃಷ್ಣ, ಕರಿಯಪ್ಪ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.