ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂ ಕಿಸಾನ್; ಅನರ್ಹರಿಗೆ ₹ 3.40 ಕೋಟಿ

ದಿಶಾ ಸಮಿತಿ ಸಭೆ: ‘ಪ್ರಜಾವಾಣಿ’ ವರದಿ ಪ್ರಸ್ತಾಪಿಸಿದ ಸಂಸದ
Last Updated 30 ಸೆಪ್ಟೆಂಬರ್ 2022, 3:01 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪಿಎಂ ಕಿಸಾನ್ ಯೋಜನೆಯಡಿ ಜಿಲ್ಲೆಯಲ್ಲಿ ಎಷ್ಟು ಮಂದಿ ಅನರ್ಹರಿಗೆ ಎಷ್ಟು ಹಣ ನೀಡಲಾಗಿದೆ. ಈ ಬಗ್ಗೆ ‘ಪ್ರಜಾವಾಣಿ’ ಮುಖಪುಟದಲ್ಲಿ ದೊಡ್ಡ ಹೆಡ್‌ಲೈನ್‌ನಲ್ಲಿ ಸುದ್ದಿ ಬಂದಿದೆ. ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಅಕ್ರಮ ನಡೆದಿದೆ. ಹೀಗೆಂದು ಇಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ, ಕೃಷಿ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಪ್ರಜಾವಾಣಿ’ ಮುಖಪುಟದಲ್ಲಿ ಸೆ.28ರಂದು ‘ಪಿ.ಎಂ.ಕಿಸಾನ್ ಯೋಜನೆ: 3.97 ಲಕ್ಷ ಅನರ್ಹರಿಗೆ ₹442 ಕೋಟಿ ಪಾವತಿ’ ಎನ್ನುವ ವರದಿ ಪ್ರಕಟವಾಗಿತ್ತು. ಈ ವರದಿ ಆಧರಿಸಿ ಸಂಸದರು
ಅಧಿಕಾರಿಗಳಿಂದ ಮಾಹಿತಿ ಕೇಳಿದರು.

ಆಗ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ‘ಜಿಲ್ಲೆಯಲ್ಲಿ ಯೋಜನೆಯಡಿ ₹3.40 ಕೋಟಿ ಅನರ್ಹರ ಪಾಲಾಗಿದೆ. ಅನರ್ಹರಿಂದ ಹಣ ವಸೂಲಿ ಮಾಡಲಾಗುವುದು’ ಎಂದರು. ಆಗ ಕೆಲವು ಸದಸ್ಯರು ‘ಇಲಾಖೆ ಅಧಿಕಾರಿಗಳ ಸಹಕಾರವಿಲ್ಲದೆ ಈ ರೀತಿಯ ಅಕ್ರಮಗಳು ನಡೆಯಲು ಸಾಧ್ಯವಿಲ್ಲ’ ಎಂದು ಜೋರು ಧ್ವನಿಯಲ್ಲಿ ಹೇಳಿದರು.

2019ರಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆ ಜಾರಿಗೊಳಿಸಿತು. ಆದಾಯ ತೆರಿಗೆ ಪಾವತಿಸುವ ಹಿಡುವಳಿದಾರರು, ಸಾಂಸ್ಥಿಕ ಭೂ ಹಿಡುವಳಿದಾರರು ಈ ಯೋಜನೆಗೆ ಅರ್ಹರಲ್ಲ. ಆದರೆ ಇಂತಹ
ರೈತರು ಸಹ ಯೋಜನೆಯನ್ನು
ದುರುಪಯೋಗಪಡಿಸಿಕೊಂಡಿದ್ದಾರೆ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT