ಸೋಮವಾರ, ಜುಲೈ 4, 2022
22 °C
ಚಿನ್ನಾಭರಣ ದೋಚಲು ದುಷ್ಕೃತ್ಯ: ಮೂವರ ಬಂಧನ

ವೃದ್ಧ ದಂಪತಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಡ್ಲಘಟ್ಟ: ನಗರದಲ್ಲಿ ಫೆ. 10ರಂದು ನಡೆದಿದ್ದ ವೃದ್ಧ ದಂಪತಿ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಫೈಜ್ (20) ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರನ್ನು ಬಂಧಿಸಲಾಗಿದೆ. 

‘ಶಿಡ್ಲಘಟ್ಟ ನಗರದ ವಾಸವಿ ಕಲ್ಯಾಣ ಮಂಟಪದ ಹಿಂದೆ ಇದ್ದ ಮನೆಯಲ್ಲಿ ವಾಸವಿದ್ದ ಬಟ್ಟೆಯ ವ್ಯಾಪಾರಿ ಶ್ರೀನಿವಾಸ್ ಅಲಿಯಾಸ್ ದೊಂತಿ ಸೀನಪ್ಪ (76) ಮತ್ತು ಅವರ ಪತ್ನಿ ಪದ್ಮಾವತಿ(67) ಅವರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ವಿಶೇಷ ತನಿಖಾದಳ ಬಂಧಿಸಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಸುದ್ದಿಗಾರರಿಗೆ ಮಂಗಳವಾರ ತಿಳಿಸಿದರು.

‘ಸೀನಪ್ಪ ಹಲವು ವರ್ಷಗಳಿಂದ ಬಟ್ಟೆ ವ್ಯಾ‍ಪಾರ ಮಾಡುತ್ತಿದ್ದಾರೆ. ಈ ಬಗ್ಗೆ ಅರಿವಿದ್ದ ಆರೋಪಿಗಳು ಚಿನ್ನಾಭರಣ ಮತ್ತು ಹಣ ದೋಚಲು ಉದ್ದೇಶದಿಂದಲೇ ಈ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿ ಕೊಂಡಿದ್ದಾರೆ’ ಎಂದು
ತಿಳಿಸಿದರು.

ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಕಾನ್‌ಸ್ಟೆಬಲ್‌ಗಳಾದ ಶ್ರೀಹರಿ, ಹರೀಶ್ ಅವರ ವಿಶೇಷ ಶ್ರಮದಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಆರೋಪಿಗಳು ಹಲವು ದ್ವಿಚಕ್ರವಾಹನ, ಕುರಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಜಿಲ್ಲೆಯ ಕೆಂಚಾರ್ಲಹಳ್ಳಿ ಹಾಗೂ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು
ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು