ಚಿಂತಾಮಣಿಯಲ್ಲಿ ಶುಕ್ರವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು
ಸಂಘಟನೆ ಸುಲಭದ ಮಾತಲ್ಲ. ಬದ್ಧತೆ ಮತ್ತು ಸಾಮಾಜಿಕ ಕಾಳಜಿ ಇರಬೇಕು. ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ನಿಷ್ಠೆಯಿಂದ ಮಾಡಬೇಕು. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು
ನಿಖಿಲ್ ಕುಮಾರಸ್ವಾಮಿ ಅಧ್ಯಕ್ಷ ಜೆಡಿಎಸ್ ಯುವ ಘಟಕ
ಎತ್ತಿನ ಹೊಳೆ: ಹಣ ಮಾಡುವ ದಂಧೆ
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಹರಿಸಲು ರೂಪಿಸಿರುವ ಎತ್ತಿನ ಹೊಳೆ ಯೋಜನೆ ಹಣ ಮಾಡುವ ದಂಧೆಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ₹13ಕೋಟಿಯಿಂದ ಆರಂಭವಾದ ಯೋಜನೆ ಇಂದು ₹30 ಕೋಟಿಗೆ ಬಂದು ನಿಂತಿದೆ. 12 ವರ್ಷಗಳಾದರೂ ನೀರು ಮಾತ್ರ ಸಕಲೇಶಪುರದಿಂದ ಮುಂದಕ್ಕೆ ಹರಿಯಲಿಲ್ಲ. ಕೋಲಾರ ಮತ್ತು ಚಿಕ್ಕಬಳ್ಳಾಪು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಮರೀಚಿಕೆಯಾಗಿದೆ ಎಂದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಮುಂದಿನ ದಿನಗಳಲ್ಲಿ ಶಾಶ್ವತವಾದ ನೀರಾವರಿ ಸೌಲಭ್ಯವನ್ನು ಒದಗಿಸಿಕೊಡಲಿದೆ ಎಂದು ಭರವಸೆ ನೀಡಿದರು.
ವ್ಯಾಲಿ ನೀರು ಆರೋಗ್ಯಕ್ಕೆ ಮಾರಕ
ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಿಗೆ ನೀರು ತುಂಬಲು ರೂಪಿಸಿರುವ ಕೆ.ಸಿ ಮತ್ತು ಎಚ್.ಎನ್ ವ್ಯಾಲಿ ನೀರು ಕಲುಷಿತವಾಗಿದೆ. ಬೆಂಗಳೂರಿನ ಕೊಳಚೆ ನೀರನ್ನು ಎರಡನೇ ಹಂತದಲ್ಲಿ ಶುದ್ಧೀಕರಿಸಲಾಗಿದೆ ಎಂದು ಹೇಳುತ್ತಿದ್ದಾರೆ. ಕೊಳಚೆ ನೀರನ್ನು ಶುದ್ಧೀಕರಿಸುವ ತಂತ್ರಜ್ಞಾನ ಭಾರತದಲ್ಲಿ ಮಾತ್ರವಲ್ಲ. ವಿಶ್ವದ ಯಾವ ದೇಶದಲ್ಲೂ ಇಲ್ಲ. ಕೊಳಚೆ ನೀರಿನಿಂದ ಬೆಳೆಯುತ್ತಿರುವ ಹಣ್ಣು ತರಕಾರಿ ಜನರ ಆರೋಗ್ಯಕ್ಕೆ ಮಾರಕ ಎಂದು ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.