ಮಂಗಳವಾರ, ಆಗಸ್ಟ್ 16, 2022
29 °C

ಶಿಡ್ಲಘಟ್ಟ: ಪೂಜಮ್ಮ ದೇವಿ ಹಸಿ ಕರಗದ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ಇಲ್ಲಿನ ಬೈಪಾಸ್ ರಸ್ತೆಯಲ್ಲಿರುವ ಶ್ರೀಪೂಜಮ್ಮದೇವಿಯ ಹಸಿ ಕರಗ ಮಹೋತ್ಸವ ಶನಿವಾರ ರಾತ್ರಿ ನೆರವೇರಿತು.

ಪ್ರತಿವರ್ಷ ಅದ್ದೂರಿಯಾಗಿ ನಡೆಯುತ್ತಿದ್ದ ಕರಗ ಮಹೋತ್ಸವವನ್ನು ಈ ಭಾರಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಹಸಿ ಕರಗದ ಪ್ರಯುಕ್ತ ನಗರದ ಪೂಜಮ್ಮ ದೇವಿ ದೇವಾಲಯದಲ್ಲಿ ವಿಶೇಷ ಅಲಂಕಾರದೊಂದಿಗೆ ಪೂಜೆ ನಡೆಸಲಾಯಿತು.

ಹಿಂದೆ ನಗರದೆಲ್ಲೆಡೆ ಕರಗದ ಮೆರವಣಿಗೆ ರಾತ್ರಿಯೆಲ್ಲಾ ನಡೆಯುತ್ತಿತ್ತು. ನಗರದ ವಿವಿಧೆಡೆ ಆರ್ಕೇಸ್ಟ್ರಾ ಆಯೋಜಿಸಲಾಗುತ್ತಿತ್ತು. ಆದರೆ, ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನದ ಮಟ್ಟಿಗೆ ಮಾತ್ರ ಆಚರಣೆ ಸೀಮಿತಗೊಂಡಿತ್ತು. ಹಲವಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಕರಗ ಹಾಗೂ ದೇವರ ದರ್ಶನ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು