ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಲ್ಲಾಲಂಪಲ್ಲಿ ಶಾಲೆಯಲ್ಲಿ ಪೋಷಣ್ ಅಭಿಯಾನ

Published : 18 ಸೆಪ್ಟೆಂಬರ್ 2024, 14:15 IST
Last Updated : 18 ಸೆಪ್ಟೆಂಬರ್ 2024, 14:15 IST
ಫಾಲೋ ಮಾಡಿ
Comments

ಚೇಳೂರು: ತಾಲ್ಲೂಕಿನ ಬೆಲ್ಲಾಲಂಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಷ್ಟ್ರಿಯ ಪೋಷನ್ ಅಭಿಯಾನ ಮಾಸಾಚರಣೆ ಬುಧವಾರ ನಡೆಯಿತು.

ಶಾಲಾ ಪ್ರಭಾರಿ ಮುಖ್ಯ ಶಿಕ್ಷಕಿ ಎನ್.ಶಶಿಕಲಾ ಮಾಸಾಚರಣೆಗೆ ಚಾಲನೆ ನೀಡಿ ಮಾತನಾಡಿ, ‘ಶಾಲಾ ವಿದ್ಯಾರ್ಥಿಗಳಿಗೆ ಸಮತೋಲಿತ ಆಹಾರ ಅತಿ ಮುಖ್ಯ. ಮಕ್ಕಳು ತಮ್ಮ ಹೆಚ್ಚಿನ ಸಮಯವನ್ನು ಹೆಚ್ಚಿನ ಶಕ್ತಿಯನ್ನು ವ್ಯಯಿಸುವ ಚಟುವಟಿಕೆಗಳಲ್ಲಿ ಕಳೆಯುತ್ತಾರೆ. ಮಗು ಆರೋಗ್ಯಕರವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಆರೋಗ್ಯಕರ ಆಹಾರ ಪದ್ಧತಿಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ’ ಎಂದರು.

ಅಂಗನವಾಡಿ ಕಾರ್ಯಕರ್ತೆ ಶಂಕರಮ್ಮ ಮಾತನಾಡಿ, ‘ಪೋಷನ್ ಅಭಿಯಾನವು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರ ಸೇವನೆ ಮಾಡುವುದು ಮುಖ್ಯ. ಗರ್ಭಿಣಿ, ಬಾಣಂತಿಯರು ಹಸಿರು ತರಕಾರಿ, ಸೊಪ್ಪು, ಕಾಳು, ಹಣ್ಣು ಸೇವನೆ ಮಾಡುವುದರಿಂದ ರಕ್ತಹೀನತೆ ತಡೆ ಸಾಧ್ಯವಾಗುತ್ತದೆ’ ಎಂದರು.

ಡಿ.ಎಸ್.ಸೋಮಶೇಖರ್ ರೆಡ್ಡಿ, ಆಶಾ ಕಾರ್ಯಕರ್ತೆ ಭಾರತಮ್ಮ, ಗಂಗುಲಮ್ಮ, ಶಿವಪ್ಪ, ಭದ್ರಯ್ಯ, ಸುರೇಶ್, ಸುನೀತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT