ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ‘ಅಭ್ಯಾಸ ಕೈಪಿಡಿ’

ಎಸ್ಸೆಸ್ಸೆಲ್ಸಿ 6 ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ
Last Updated 22 ಏಪ್ರಿಲ್ 2021, 5:08 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: 2020-2021ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಪ್ರಗತಿಗಾಗಿ ನಿಧಾನಗತಿಯ ಕಲಿಕೆಯ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹೊರತರಲಾದ ಅಭ್ಯಾಸ ಕೈಪಿಡಿಯನ್ನು ಜಿಲ್ಲಾಧಿಕಾರಿ ಆರ್.ಲತಾ ಬುಧವಾರ ಬಿಡುಗಡೆ ಮಾಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ, ಒಳ್ಳೆಯ ಶಿಕ್ಷಣವು ಉತ್ತಮ ಭವಿಷ್ಯಕ್ಕೆ ಬುನಾದಿಯಾಗುತ್ತದೆ. ಈ ದಿಸೆಯಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದಿಸೆಯಲ್ಲಿ ಶಿಕ್ಷಣ ಇಲಾಖೆಯು ಅಭ್ಯಾಸ ಕೈಪಿಡಿಯನ್ನು ಹೊರತಂದಿದೆ ಎಂದರು.

ಈ ಕೈಪಿಡಿಯು ಮುಂದಿನ ಪರೀಕ್ಷೆಗೆ ಯೋಜಿತ ರೀತಿಯಲ್ಲಿ ಸನ್ನದ್ಧರಾಗಲು ಜಿಲ್ಲೆಯ ಸಂಪನ್ಮೂಲ ಶಿಕ್ಷಕರ ಸಹಕಾರದೊಂದಿಗೆ 6 ವಿಷಯಗಳಿಗೆ ಸಂಬಂಧಿಸಿದಂತೆ ಕೈಪಿಡಿ ರಚಿಸಲಾಗಿದೆ. ಅಲ್ಲದೆ, ಈ ಅಭ್ಯಾಸ ಕೈಪಿಡಿಯುಪ್ರಶ್ನೆಪತ್ರಿಕೆ ವಿನ್ಯಾಸ ಮತ್ತು ಬಹು ನಿರೀಕ್ಷಿತ ಪ್ರಶ್ನೋತ್ತರಗಳ ಆಧಾರದಂತೆ ರೂಪಿಸಲಾಗಿದೆ. ಈ ಅಭ್ಯಾಸ ಕೈಪಿಡಿಯನ್ನು ನಿರಂತರವಾಗಿ ಅಭ್ಯಾಸ ಮಾಡಿ ಪುನರಾವರ್ತನೆ ಮಾಡುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮವಿಶ್ವಾಸ ಹೊಂದಿ ನಿರ್ಭಯವಾಗಿ ಪರೀಕ್ಷೆಯನ್ನು ಬರೆಯಲು ಸಶಕ್ತರಾಗಲಿದ್ದಾರೆ. ಹಾಗಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಈ ಅಭ್ಯಾಸ ಕೈಪಿಡಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಸಿಇಒ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಮರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT