ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನೀರಿನಲ್ಲಿ ನೈಟ್ರೇಟ್ ಮತ್ತು ಫ್ಲೋರೈಡ್ ಪ್ರಮಾಣ ಹೆಚ್ಚಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎನ್ನುವ ವರದಿ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿನ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸುವಂತೆ ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಚಿಕ್ಕಬಳ್ಳಾಪುರ ಉಪವಿಭಾಗದ ಎಂಜಿನಿಯರ್ಗಳಿಗೆ ಸೂಚಿಸಿದ್ದಾರೆ.

‘ಚಿಕ್ಕಬಳ್ಳಾಪುರ ನೀರು ಆರೋಗ್ಯಕ್ಕೆ ಕಂಟಕ’ ಎನ್ನುವ ‘ಪ್ರಜಾವಾಣಿ’ಯಲ್ಲಿ ಮಂಗಳವಾರ ಪ್ರಕಟವಾಗಿತ್ತು.

ಚಾಮರಾಜನಗರದದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗ, ಬೆಂಗಳೂರಿನ ಡಾ.ಶ್ರೀ.ಶ್ರೀ.ಶ್ರೀ ಶಿವಕುಮಾರ ಸ್ವಾಮೀಜಿ ಎಂಜಿನಿಯರಿಂಗ್ ಕಾಲೇಜು, ಬೀದರ್ನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗ, ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಫಾರ್ ಹ್ಯೂಮನ್ ಸೆಟ್ಲ್ಮೆಂಟ್ (ಐಐಎಚ್ಎಸ್) ಸಂಸ್ಥೆ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ನಡೆದ ನೀರಿನ ಅಧ್ಯಯನ ವರದಿ ಆಧರಿಸಿ ಪತ್ರಿಕೆ ವರದಿ ಪ್ರಕಟಿಸಿತ್ತು.

‘ಪ್ರಜಾವಾಣಿ’ ವರದಿಯಲ್ಲಿ ಪ್ರಕಟವಾಗಿರುವ ಎಲ್ಲ ಗ್ರಾಮಗಳಲ್ಲಿಯೂ ಫ್ಲೋರೈಡ್ ಮತ್ತು ನೈಟ್ರೇಟ್ ಅಂಶ ಸೇರಿದಂತೆ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ ವರದಿ ನೀಡಬೇಕು ಎಂದು ಇಒ ಸೂಚಿಸಿದ್ದಾರೆ.

ಜಿಲ್ಲೆಯ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಯೋಗಾಲಯಗಳು ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.