ಮಂಗಳವಾರ, ಜುಲೈ 14, 2020
28 °C

ವಿಶ್ವ ಪರಿಸರ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ವಿಶ್ವ ಪರಿಸರ ದಿನಾಚರಣೆಯನ್ನು (ಜೂನ್ 5) ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹತ್ತು ಹಲವು ನವ ನವೀನ ಕಾರ್ಯಕ್ರಮಗಳನ್ನು ರೂಪಿಸಲು ಕ್ರಮಕೈಗೊಳ್ಳಿ’ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ಪರಿಸರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿಅವರು ಮಾತನಾಡಿದರು.

‘ಎನ್.ಎಸ್.ಎಸ್, ಎನ್.ಸಿ.ಸಿ ಸ್ಕೌಟ್ ಗೈಡ್ಸ್ ತಂಡದ ವಿದ್ಯಾರ್ಥಿಗಳನ್ನು ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಬೇಕು. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲಾ ಕಾಲೇಜು, ಗುಂಡು ತೋಪು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧ ಸರ್ಕಾರಿ ಕಛೇರಿಗಳ ಆವರಣದಲ್ಲಿ ಗಿಡ ನೆಡಲು ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ಸ್ಥಗಳನ್ನು ಗುರುತಿಸಿ ಎಷ್ಟು ಸಸಿಗಳು ಬೇಕು ಎಂಬುದರ ಬಗ್ಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

‘ಪರಿಸರ ಮಹತ್ವ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ವಿವಿಧ ಇಲಾಖೆಗಳ ಸಹಕಾರದಿಂದ ಪರಿಸರ ದಿನಾಚರಣೆಯನ್ನು ಹಿಂದಿನ ಬಾರಿಯಂತೆ ವ್ಯವಸ್ಥಿತವಾಗಿ ಮತ್ತು ಅಚ್ಚುಕಟ್ಟಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ನಮ್ಮ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಯ ಜೊತೆಗೆ ಗಿಡಗಳ ರಕ್ಷಣೆಯೂ ಅಷ್ಟೇ ಅಗತ್ಯವಾಗಿದೆ. ಗಿಡ ನೆಡುವ ಜತೆಗೆ ಗಿಡ ಬೆಳೆಸುವುದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ವರ್ಷ ಪೂರ್ತಿ ಹೆಚ್ಚು ಗಿಡ ನೆಟ್ಟು ರಕ್ಷಣೆ ಮಾಡುವ ಮೂಲಕ ಪತ್ರಿಯೊಬ್ಬರೂ ಪರಿಸರದ ಮಹತ್ವ ಸಾರೋಣ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಉಪ ಅರಣ್ಯ ಸಂರಕ್ಷಾಣಾಧಿಕಾರಿ ಅರ್ಸಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು