ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಭರದ ಸಿದ್ಧತೆ

ಚಿಂತಾಮಣಿ ತಾಲ್ಲೂಕಿನಲ್ಲಿ 18 ಪರೀಕ್ಷಾ ಕೇಂದ್ರ
Last Updated 1 ಜುಲೈ 2021, 4:13 IST
ಅಕ್ಷರ ಗಾತ್ರ

ಚಿಂತಾಮಣಿ: 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗೊಂದಲ ಮುಕ್ತಾಯವಾಗಿದ್ದು, ಜುಲೈ 19, 22 ರಂದು ಪರೀಕ್ಷೆ ನಡೆಯುವುದು ಖಚಿತವಾಗಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಈ ವರ್ಷ ಪರೀಕ್ಷಾ ಪದ್ಧತಿಯನ್ನೇ ಬದಲಾಯಿಸಲಾಗಿದೆ. ವೇಳಾಪಟ್ಟಿ ಪ್ರಕಟವಾದ ನಂತರ ಅಧಿಕಾರಿಗಳು ಮತ್ತು ಶಿಕ್ಷಕರು ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳಲ್ಲಿ ತೊಡಗಿದ್ದಾರೆ.

ತಾಲ್ಲೂಕಿನಲ್ಲಿ ಈ ವರ್ಷ 3,666 ಮಂದಿ ಹೊಸ ವಿದ್ಯಾರ್ಥಿಗಳು, 29 ಪುನರಾವರ್ತಿತರು ಹಾಗೂ 166 ಮಂದಿ ಖಾಸಗಿ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕೋವಿಡ್ ಕಾರಣದಿಂದ ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ. ಕಳೆದ ಬಾರಿ ತಾಲ್ಲೂಕಿನಲ್ಲಿ 14 ಕೇಂದ್ರ ಇತ್ತು. ಈ ಬಾರಿ 18ಕ್ಕೆ ಏರಿಸಲಾಗಿದೆ.

ಸಾಮಾನ್ಯವಾಗಿ ಒಂದು ಕೊಠಡಿಗೆ 20-24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಇತ್ತು. ಈಗ ಒಂದು ಡೆಸ್ಕ್‌ನಲ್ಲಿ ಒಬ್ಬ ವಿದ್ಯಾರ್ಥಿಯಂತೆ, ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಪ್ರತಿವರ್ಷ 6 ದಿನಗಳ ಕಾಲ ಪರೀಕ್ಷೆ ನಡೆಯುತ್ತಿತ್ತು. ಈ ವರ್ಷ 2 ದಿನಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಜುಲೈ 19 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಪ್ರಥಮ ಭಾಷೆ, ದ್ವಿತೀಯ ಭಾಷೆ ಹಾಗೂ ತೃತೀಯ ಭಾಷೆಯ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳು ಮಾತ್ರ ಇರಲಿವೆ. ಪ್ರತಿ ಪ್ರಶ್ನೆಗೂ ಒಂದು ಅಂಕ ನಿಗದಿಪಡಿಸಲಾಗಿದೆ. ಪ್ರತಿ ವಿಷಯಕ್ಕೂ 40 ಅಂಕಗಳಂತೆ ಒಂದು ಪ್ರಶ್ನೆ ಪತ್ರಿಕೆಗೆ 120
ಅಂಕಗಳಿರುತ್ತವೆ.

ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಎಸ್‌ಒಪಿ) ನೀಡಿರುವ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಲಾಗುತ್ತದೆ. ಪ್ರತಿದಿನ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯುತ್ತದೆ.
ಈ ಬಾರಿ ಯಾರನ್ನೂ ಅನುತ್ತೀರ್ಣಗೊಳಿಸದೆ ಎಲ್ಲರನ್ನೂ ತೇರ್ಗಡೆ ಮಾಡಲಾಗುತ್ತದೆ.

ಕೋವಿಡ್ ತಡೆಗೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ನೆಗಡಿ, ಕೆಮ್ಮು, ಜ್ವರ ಇದ್ದರೆ ಪ್ರತ್ಯೇಕ ಕೊಠಡಿಯಲ್ಲಿ ಅವಕಾಶ ನೀಡಲಾಗುವುದು. ಸೋಂಕಿತರಾಗಿದ್ದು ಪರೀಕ್ಷೆ ಬರೆಯಲು ಇಚ್ಚಿಸಿದರೆ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ.

ಪರೀಕ್ಷಾ ಕೆಲಸಕ್ಕೆ ನೇಮಕಗೊಂಡವರು ಕಡ್ಡಾಯವಾಗಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಲೇಬೇಕು. ಶಿಕ್ಷಕ ಮತ್ತು ಸಿಬ್ಬಂದಿಗೆ ಆದ್ಯತೆ ಮೇರೆಗೆ ಲಸಿಕೆಯನ್ನು ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು
ಹೇಳುತ್ತಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT