ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಜುಲೈ 3ರಂದು ನಡೆಯುವ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಎರಡನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಜುಲೈ 2ರ ಬೆಳಿಗ್ಗೆ 6ರಿಂದ ಜುಲೈ 3ರ ಸಂಜೆ 6ರವರೆಗೆ ಪ್ರಸಿದ್ಧ ಪ್ರವಾಸಿ ತಾಣಗಳಾದ ನಂದಿಗಿರಿಧಾಮ ಮತ್ತು ಸ್ಕಂದಗಿರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.
ಸತ್ಯಸಾಯಿ ಗ್ರಾಮವಿರುವ ನಂದಿ ಹೋಬಳಿಯಲ್ಲಿಯೇ ಈ ಎರಡೂ ಪ್ರಸಿದ್ಧ ಪ್ರವಾಸಿ ತಾಣಗಳು ಇವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.