ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ: ಆಗಸ್ಟ್‌ 30ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Published 29 ಆಗಸ್ಟ್ 2023, 14:13 IST
Last Updated 29 ಆಗಸ್ಟ್ 2023, 14:13 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ‘ಮನೆ ಒಡತಿಗೆ ಪ್ರತಿ ತಿಂಗಳು ₹2,000 ನೀಡುವ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ ನೀಡಲಿದ್ದಾರೆ’ ಎಂದು ನಗರಸಭೆ ಪೌರಾಯುಕ್ತ ಬಿ.ಜಿ.ಆಂಜನೇಯುಲು ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬ ಯಜಮಾನಿಗೆ ಪ್ರತಿ ತಿಂಗಳು ತಲ ₹2000 ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ರಾಜ್ಯ ಸರ್ಕಾರ ತಂದಿದೆ. ಮೈಸೂರಿನಲ್ಲಿ ಈ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದು, ಕ್ಷೇತ್ರದಲ್ಲಿ ಶಾಸಕ ರವಿಕುಮಾರ್ ಚಾಲನೆ ನೀಡಿದ್ದಾರೆ ಎಂದರು. 

ನಗರಸಭೆ ಸಮುದಾಯ ಭವನ, ವಾಸವಿ ಕಲ್ಯಾಣ ಮಂಟಪ, ತಾಲ್ಲೂಕು ಕಚೇರಿ ಸಭಾಂಗಣ, ಸ್ತ್ರೀಶಕ್ತಿ ಭವನ, ಡಾಲ್ಫಿನ್ ಪಬ್ಲಿಕ್ ಶಾಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನಗರೇಶ್ವರ ಕಲ್ಯಾಣ ಮಂಟಪ, ಬಿ.ಎಸ್.ಎಂ. ಶಾದಿ ಮಹಲ್ ಗಳಲ್ಲಿ ಕಾರ್ಯಕ್ರಮ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT