ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಪ್ರತಿಭಟನೆ

Last Updated 22 ಅಕ್ಟೋಬರ್ 2021, 4:19 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ವರ್ಗಾವಣೆ, ವೇತನಗಳ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದತಿ, ಗ್ರಾಮೀಣ ಕೃಪಾಂಕ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆನಡೆಸಿದರು.

ಸಂಘದ ತಾಲ್ಲೂಕು ಅಧ್ಯಕ್ಷ ಪಿ. ವೆಂಕಟರವಣಪ್ಪ ಮಾತನಾಡಿ, ಶಿಕ್ಷಕರ ಸಮಸ್ಯೆ ಬಗೆಹರಿಸಲು ಹಲವು ವರ್ಷಗಳಿಂದ ಮನವಿ ಸಲ್ಲಿಸಿದರೂ ಪರಿಹರಿಸಿಲ್ಲ. ಸರ್ಕಾರದ ಧೋರಣೆ ಖಂಡಿಸಿ ಅ. 4ರಿಂದ ತರಬೇತಿಗಳನ್ನು ಬಹಿಷ್ಕರಿಸಲಾಗಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಸಿದ್ದಪ್ಪ ಮನವಿ ಪತ್ರ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಆರ್. ಹನುಮಂತರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಪ್ರಭಾವತಿ, ತಾಲ್ಲೂಕು ಉಪಾಧ್ಯಕ್ಷ ಆಂಜನೇಯಲು, ತಾಲ್ಲೂಕು ಕಾರ್ಯದರ್ಶಿ ಸಿ. ವೆಂಕಟರಾಯಪ್ಪ, ಮಹಿಳಾ ಉಪಾಧ್ಯಕ್ಷೆ ವಿ. ಸುಮಾ, ಖಜಾಂಚಿ ಎಚ್.ಎಸ್. ವರುಣ್, ಸಂಘಟನಾ ಕಾರ್ಯದರ್ಶಿ ಕದಿರಪ್ಪ, ನಿರ್ದೇಶಕ ರಂಗಾರೆಡ್ಡಿ
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT