ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ

ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚನೆ
Last Updated 22 ಸೆಪ್ಟೆಂಬರ್ 2020, 14:29 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಘನತಾಜ್ಯ ನಿರ್ವಹಣಾ ಘಟಕಗಳನ್ನು ಏಕಕಾಲದಲ್ಲಿ ಕಾರ್ಯಾರಂಭ ಮಾಡುವ ಜತೆಗೆ ಸ್ವಚ್ಛೋತ್ಸವ - ನಿತ್ಯೋತ್ಸವ ಮಾಸಾಚರಣೆಯನ್ನು ಜಿಲ್ಲೆಯಾದ್ಯಂತ ಆಚರಿಸಬೇಕು. ತ್ಯಾಜ್ಯ ವಿಲೇವಾರಿ ಸಮಸ್ಯೆಗಳನ್ನು ಆಯಾ ತಾಲ್ಲೂಕು ಮಟ್ಟದಲ್ಲಿಯೇ ಪರಿಹರಿಸಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮದಿನದ ಸಂದರ್ಭದಲ್ಲಿ ಅವರ ಮಹತ್ವ ಆಲೋಚನೆಯಾದ ಸ್ವಚ್ಛ ಭಾರತ ಹಾಗೂ ಗ್ರಾಮ ಅಭಿವೃದ್ಧಿಗೆ ಒತ್ತು ನೀಡುವ ಕೆಲಸಗಳನ್ನು ಮಾಡಬೇಕಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ಜನರಲ್ಲಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ’ ಎಂದು ಹೇಳಿದರು.

‘ಪ್ರತಿನಿತ್ಯ ಗ್ರಾಮೀಣ ಪ್ರದೇಶಗಳೊಂದಿಗೆ ಸಂಪರ್ಕ ಹೊಂದಿರುವ ಅಧಿಕಾರಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ನಗರ, ಪಟ್ಟಣಗಳು ಮಾತ್ರವಲ್ಲದೆ ಗ್ರಾಮಗಳಲ್ಲಿ ಕೂಡ ಸ್ವಚ್ಛತೆಗೆ ಹೆಚ್ಚಿನ ಪ್ರಾಶಸ್ಥ್ಯ ನೀಡಬೇಕು ಎಂಬ ಸಚಿವರ ಆಶಯದಂತೆ ಸಾಮೂಹಿಕ ಶೌಚಾಲಯಗಳ ನಿರ್ಮಾಣ ಸೇರಿದಂತೆ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು’ ಎಂದು ತಿಳಿಸಿದರು.

‘ಸ್ಥಳೀಯ ಮಾಧ್ಯಮಗಳಲ್ಲಿ ಜಾಹೀರಾತು, ಬೀದಿ ನಾಟಕಗಳು, ಕಿರುಚಿತ್ರಗಳ ಮೂಲಕ ಸ್ವಚ್ಛತೆಯ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸಗಳನ್ನು ಮಾಡಬೇಕು’ ಎಂದರು.‘

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ವೈಜ್ಞಾನಿಕವಾಗಿ ಘನ ಮತ್ತು ದ್ರವ ತ್ಯಾಜ್ಯಗಳನ್ನು ಹೇಗೆ ವಿಂಗಡಿಸಬೇಕು ಎನ್ನುವ ಕುರಿತು ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮನೆಮನೆ ಭೇಟಿ ನೀಡಬೇಕು. ತ್ಯಾಜ್ಯ ವಿಂಗಡನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ನೋಮೇಶ್ ಕುಮಾರ್, ಯೋಜನಾ ನಿರ್ದೇಶಕ ಗಿರಿಜಾ ಶಂಕರ್ ಹಾಗೂ ಎಲ್ಲಾ ಕಾರ್ಯ ನಿರ್ವಹಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT