ಗುರುವಾರ , ಫೆಬ್ರವರಿ 25, 2021
19 °C

ಕೆಲವರನ್ನು ಮೆಚ್ಚಿಸಲು ಕಾರ್ಯಕ್ರಮ: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ‘ತಾಲ್ಲೂಕಿನ ಜಂಗಾಲಪಲ್ಲಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಸುಗ್ಗಿ-ಹುಗ್ಗಿ ಕಾರ್ಯಕ್ರಮದ ಬಗ್ಗೆ ಸ್ಥಳೀಯ ಜನರನ್ನು ಪರಿಗಣಿಸದೇ, ಕೆಲ ಮುಖಂಡರನ್ನು ಮೆಚ್ಚಿಸಲು ಕಾರ್ಯಕ್ರಮ ಹಮ್ಮಿಕೊಂಡಿರುವುದು ಯಾವ ಪುರುಷಾರ್ಥಕ್ಕಾಗಿ’ ಎಂದು ಗ್ರಾಮದ ಯುವ ಮುಖಂಡ ಎಸ್.ರಾಜಶೇಖರ್ ಪ್ರಶ್ನಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದ ಅವರು, ‘ಚಿಕ್ಕಬಳ್ಳಾಪುರದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೃಷಿ ಇಲಾಖೆಯವರು ಜಂಗಾಲಪಲ್ಲಿಯಲ್ಲಿ ಜ.14ರಂದು ಸಂಕ್ರಾಂತಿ ಹಬ್ಬದಂದು ಸುಗ್ಗಿ-ಹುಗ್ಗಿ ಕಾರ್ಯಕ್ರಮ ಮಾಡಿದ್ದಾರೆ. ಆದರೆ ಸ್ಥಳೀಯವಾಗಿ ಯಾರ ಮುಖಂಡರ ಹಾಗೂ ಜನರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಮಾಡಿಲ್ಲ. ಜನರೇ ಇಲ್ಲದ ಕಾರ್ಯಕ್ರಮ ಆಗಿದೆ. ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಜಿಲ್ಲಾ ಹಾಗೂ ತಾಲ್ಲೂಕಿನ ಜನಪ್ರತಿನಿಧಿಗಳು ಭಾಗವಹಿಸಿಲ್ಲ. ಕಾಟಾಚಾರದ ಕಾರ್ಯಕ್ರಮ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

‘ಕೆಲ ರಾಜಕೀಯ ನಾಯಕರನ್ನು ಮೆಚ್ಚಿಸಲು ಮಾಡಿದ್ದಾರೆ. ಸರ್ಕಾರದ ಕೋಟ್ಯಂತರ ಹಣ ಭ್ರಷ್ಟಾಚಾರ ಆಗಿದೆ. ಕೂಡಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೃಷಿ ಇಲಾಖೆಯ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಯವರುಕ್ರಮ ಜರುಗಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.