ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆ ಪ್ರಯುಕ್ತ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಆರ್. ಲತಾ ಅವರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಎರಡು ಹಂತಗಳಲ್ಲಿ ನಡೆಯುವ ಮತದಾನ ಆಧರಿಸಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವ ಶಿಡ್ಲಘಟ್ಟ, ಚಿಂತಾಮಣಿ ಮತ್ತು ಬಾಗೇಪಲ್ಲಿ ತಾಲ್ಲೂಕುಗಳಲ್ಲಿ ಡಿ.22ರಂದು ನಡೆಯುವ ಮತದಾನದ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳ ವ್ಯಾಪ್ತಿಯಲ್ಲಿ ಭಾನುವಾರ (ಡಿ.20) ಸಂಜೆ 5 ರಿಂದ ಡಿ.22ರ ಮಧ್ಯರಾತ್ರಿ 12ರ ವರೆಗೆ ಸಂಪೂರ್ಣ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.

ಅದೇ ರೀತಿ ಎರಡನೇ ಹಂತದಲ್ಲಿ ಮತದಾನ ನಡೆಯುವ ಚಿಕ್ಕಬಳ್ಳಾಪುರ, ಗೌರಿಬಿದನೂರು ಮತ್ತು ಗುಡಿಬಂಡೆ ತಾಲ್ಲೂಕುಗಳಲ್ಲಿ ಡಿ.25ರ ಸಂಜೆ 5 ರಿಂದ ಡಿ.27ರ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.