ಚಿಕ್ಕಬಳ್ಳಾಪುರ: ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಸದಸ್ಯರು ಧರಣಿ ನಡೆಸಿದರು.
ಸಂಘಟನೆ ರಾಜ್ಯ ಸಮಿತಿ ಸದಸ್ಯ ನಾರಾಯಣ ರೆಡ್ಡಿ ಮಾತನಾಡಿ, ಹರಿಯಾಣದಲ್ಲಿ ಆಗಸ್ಟ್ 7 ಮತ್ತು 8ರಂದು ನಡೆದ ಸಂಘಟನೆಯ ರಾಷ್ಟ್ರೀಯ ಮಟ್ಟದ ಸಭೆಯಲ್ಲಿ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಸಂಬಂಧ ಚರ್ಚಿಸಲಾಯಿತು. ರೈತರು ಗೌರವಯುತ ಜೀವನ ನಡೆಸಬೇಕಾದರೆ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡಬೇಕು. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಧರಣಿ ನಡೆಸಲಾಗುತ್ತಿದೆ ಎಂದು ಹೇಳಿದರು.
ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸುವ ಉತ್ಪನ್ನಗಳಿಗೆ ತಾವೇ ದರ ನಿಗದಿಮಾಡಿಕೊಳ್ಳುವರು. ಆದರೆ ರೈತರಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ. ಬೇರೊಬ್ಬರು ದರ ನಿಗದಿ ಮಾಡುವರು. ಈ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕೃಷಿ ಕ್ಷೇತ್ರ ಅವನತಿಯ ಹಾದಿ ಹಿಡಿಯುತ್ತದೆ
ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಮಚಂದ್ರ ರೆಡ್ಡಿ, ನಾರಾಯಣಸ್ವಾಮಿ, ಶಾಂತಮೂರ್ತಿ, ಸೋಮಶೇಖರ್, ಶ್ರೀನಿವಾಸ್, ವೆಂಕಟರೆಡ್ಡಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.