ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕಿಪಿಕ್ಕಿ ಸಮುದಾಯದಿಂದ ಪ್ರತಿಭಟನೆ

ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಾನಮಾನಕ್ಕೆ ಮುಖಂಡರ ಆಗ್ರ
Last Updated 1 ಅಕ್ಟೋಬರ್ 2022, 4:50 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅಲೆಮಾರಿ ಹಕ್ಕಿಪಿಕ್ಕಿ ಜನಾಂಗಕ್ಕೆ ಮೂಲಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದಿಂದ ಶುಕ್ರವಾರ ಜಿಲ್ಲಾಡಳಿತ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಹಕ್ಕಿಪಿಕ್ಕಿ ಜನಾಂಗದ ರಾಜ್ಯ ಅಧ್ಯಕ್ಷ ಜಗ್ಗು ಮಾತನಾಡಿ, ‘ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಈವರೆಗೆ ಮೂಲನಿವಾಸಿಗಳಾದ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯ
ದವರಿಗೆ ಯಾವುದೇ ಸೌಲಭ್ಯ ಒದಗಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹಕ್ಕಿ ಪಿಕ್ಕಿ ಜನಾಂಗವೂ ಇಂದಿಗೂ ಶೈಕ್ಷಣಿಕ, ಸಾಮಾಜಿಕ, ರಾಜಕೀಯ, ಆರ್ಥಿಕ ರಂಗದಲ್ಲಿ ಹಿಂದುಳಿದಿದ್ದಾರೆ. ಹೀಗಾಗಿ ಈ ಸಮುದಾಯವನ್ನು ಸಮಾಜದಲ್ಲಿ ಗುರುತಿಸಿ ಸವಲತ್ತುಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಹಕ್ಕಿಪಿಕ್ಕಿ ಜನಾಂಗದ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಗುರುತಿಸಿ ಕೊಳವೆ ಬಾವಿ ಮಂಜೂರು ಮಾಡಿಕೊಡಬೇಕು. ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಸಹಾಯಧನ ಕಲ್ಪಿಸಿಕೊಡಬೇಕು. ಸಮುದಾಯಕ್ಕೆ ಸಮುದಾಯ ಭವನ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.

ಹಕ್ಕಿ ಪಿಕ್ಕಿ ಜನಾಂಗದ ವಿವಿಧ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷಿಸಿದರೆ ನ್ಯಾಯಕ್ಕಾಗಿ ಮುಂದಿನ ದಿನಗಳಲ್ಲಿ ಜನಾಂಗದ ವತಿಯಿಂದ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಾಕಾಂತ್, ಜನಾಂಗದ ರಾಜ್ಯ ಉಪಾಧ್ಯಕ್ಷ ರಾಮ್ ಬಾಬು, ರಾಜ್ಯ ಸಂಘಟನಾ ಸಂಚಾಲಕ ಧರಣಿ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಕಿರಣ್, ಮುಖಂಡ ಗೋಪಿ ಲಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT