ಗುಡಿಬಂಡೆ: ಹೊಸವುಡ್ಯ ಗ್ರಾಮದಲ್ಲಿ ದೇವನಹಳ್ಳಿ ವಕೀಲರ ಸಂಘದ ಸದಸ್ಯ ವಕೀಲ ಮಹೇಶ್ ಅವರ ಮೇಲೆ ಕೆಲ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದನ್ನು ಖಂಡಿಸಿ ಶನಿವಾರ ವಕೀಲರು ಕೋರ್ಟ್ ಕಲಾಪ ಬಹಿಷ್ಕರಿಸಿದರು.
ವಕೀಲರ ಸಂಘದ ಅಧ್ಯಕ್ಷ ಎ.ರಾಮನಾಥರೆಡ್ಡಿ ಮಾತನಾಡಿ, ಸಮಾಜಘಾತುಕ ಶಕ್ತಿಗಳ ಕಡಿವಾಣಕ್ಕೆ ಪೊಲೀಸರು ಮುಂದಾಗಬೇಕು. ಪದೇ ಪದೇ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಲೇ ಇದೆ. ಸರ್ಕಾರ ವಕೀಲರ ರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ವಕೀಲರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು. ಇಂದು ನ್ಯಾಯಾಲಯದ ಕಾರ್ಯಕಲಾಪಗಳನ್ನು ಕೈಬಿಡಲಾಗಿದ್ದು, ಆರೋಪಿಗಳ ಪರವಾಗಿ ಯಾವುದೇ ವಕೀಲರು ವಕಾಲತ್ತು ಸಲ್ಲಿಸಬಾರದು. ವಕೀಲರ ಮೇಲಿನ ಹಲ್ಲೆಗಳನ್ನು ತಡೆಗಟ್ಟಲು ಸರಕಾರ ರಕ್ಷಣಾ ಕಾಯ್ದೆಯನ್ನು ಜಾರಿ ಮಾಡಿ ಆದೇಶ ಹೊರಡಿಸಬೇಕು ಎಂದರು.
ಗೌರಿಬಿದನೂರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಇ.ಸಿ ಗಂಗಯ್ಯ, ವಕೀಲ ನಾರಾಯಣಸ್ವಾಮಿ, ಪಿ.ವಿ.ಲಕ್ಷ್ಮಿನಾರಾಯಣ, ಗಂಗರಾಜು, ಜಿ.ವಿ. ವಿಶ್ವನಾಥ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.