ಶನಿವಾರ, ನವೆಂಬರ್ 16, 2019
22 °C

ನೂತನ ತಾಲ್ಲೂಕು: ತೊಂಡೇಬಾವಿಯಲ್ಲಿ ಪ್ರತಿಭಟನೆ

Published:
Updated:
prajavani

ಗೌರಿಬಿದನೂರು: ನೂತನವಾಗಿ ಘೋಷಣೆಯಾದ ಮಂಚೇನಹಳ್ಳಿ ತಾಲ್ಲೂಕಿಗೆ ಗೌರಿಬಿದನೂರು ಕ್ಷೇತ್ರದ ತೊಂಡೇಬಾವಿ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ತೊಂಡೇಬಾವಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತೊಂಡೇಬಾವಿ ರೈಲ್ವೆ ನಿಲ್ದಾಣದ ಬಳಿ ನಡೆದ ಈ ಪ್ರತಿಭಟನೆಯಲ್ಲಿ ತೊಂಡೇಬಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ನಾಯಕರು ಮತ್ತು ನಾಗರಿಕರು ಭಾಗವಹಿಸಿದ್ದಾರೆ.

ಈಗಾಗಲೇ ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಹಾಗೂ ನಗರದ ಸಿಪಿಐ ಎಸ್.ರವಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸುತ್ತಿದ್ದಾರೆ.

ಪ್ರತಿಭಟನಾಕಾರರು ಸ್ಥಳಕ್ಕೆ ತಹಶೀಲ್ದಾರ್ ಬರುವಂತೆ ಆಗ್ರಹಿಸುತ್ತಿದ್ದಾರೆ.

ಪ್ರತಿಕ್ರಿಯಿಸಿ (+)