ಗುರುವಾರ , ಜನವರಿ 28, 2021
22 °C

ಬಾಗೇಪಲ್ಲಿ: ಕೃಷಿ ಕೂಲಿಕಾರರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಭೂಸುಧಾರಣಾ, ಎಪಿಎಂಸಿ, ವಿದ್ಯುತ್ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ತಾಲ್ಲೂಕು ಸಮಿತಿದ ಸದಸ್ಯರು ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ಡಾ.ಎಚ್.ಎನ್.ವೃತ್ತದಿಂದ ಹೊರಟ ಕೂಲಿಕಾರ್ಮಿಕರು ಮುಖ್ಯರಸ್ತೆಯಲ್ಲಿ ಸಂಚರಿಸಿ, ಕೇಂದ್ರ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ, ಪ್ರತಿಭಟನಾ ಮೆರವಣಿಗೆ ಮಾಡಿದರು.

ಸಂಘದ ರಾಜ್ಯ ಸಮಿತಿ ಅಧ್ಯಕ್ಷ ನಿತ್ಯಾನಂದಸ್ವಾಮಿ ಮಾತನಾಡಿ, ‘ಕೃಷಿ ಕಾಯ್ದೆಗಳ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯಬೇಕು ಎಂದು ನವದೆಹಲಿಯ ಹೊರವಲಯದಲ್ಲಿ ದೇಶದ ರೈತರು ಹೋರಾಟ ಮಾಡುತ್ತಿದ್ದಾರೆ. ಬಲವಂತವಾಗಿ ಯಾರೂ ಕರೆತಂದಿಲ್ಲ. ಧನ ಸಹಾಯ ಪಡೆದಿಲ್ಲ. ಯಾವ ರಾಜಕೀಯ ಪಕ್ಷಗಳ ಬಾವುಟಗಳು ಇಲ್ಲ. ಕೃಷಿಯ ಮೇಲೆ ಪ್ರಭಾವ ಬೀರುವುದನ್ನು ಮನಗಂಡು, ಹೋರಾಟ ಮಾಡುತ್ತಿದ್ದಾರೆ ವಿನಾಃ, ರೈತರ ಹೋರಾಟದ ಹಿಂದೆ ಅನ್ಯ ಪಕ್ಷಗಳು ಇಲ್ಲ. ಆದರೆ ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ ಎಡಪಕ್ಷಗಳ ಮೇಲೆ ಆರೋಪ ಮಾಡುತ್ತಿರುವುದು ಖಂಡನೀಯವಾಗಿದೆ’ ಎಂದು ತಿಳಿಸಿದರು.

‘ದೇಶದ ರೈತರ ಮೇಲೆ ವಿಶ್ವಾಸ ಇದ್ದರೆ, ಸಂಸತ್ತಿನಲ್ಲಿ ಮಸೂದೆಗಳ ಮೇಲೆ ಚರ್ಚೆ ಮಾಡಬೇಕಾಗಿತ್ತು. ಕೇಂದ್ರ ಸರ್ಕಾರ ಬಂಡತನ ಪ್ರದರ್ಶನ ಮಾಡುತ್ತಿದೆ. ಜನವರಿ 26ರಂದು ಗಣರಾಜ್ಯೋತ್ಸವ ದಿನದಂದು ರೈತರು ಬೃಹತ್ ಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲು ಟ್ರಾಕ್ಟರ್‌ಗಳ ಮೆರವಣಿಗೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಹ ರೈತರ ಪ್ರತಿಭಟನೆ ಬೆಂಬಲಿಸಿ, ಹೋರಾಟ ತೀವ್ರಗೊಳಿಸಲಾಗುವುದು’ ಎಂದರು.

ಯುವ ಮುಖಂಡ ಡಾ.ಅನಿಲ್ ಕುಮಾರ್ ಮಾತನಾಡಿ, ‘ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ವಿರೋಧ ನೀತಿಗಳ ವಿರುದ್ಧ ರೈತರು ಹೋರಾಟ ಪ್ರತಿಭಟನೆ ಮಾಡುತ್ತಿದ್ದಾರೆ. ಹೋರಾಟಕ್ಕೆ ಬೆಂಬಲವಾಗಿ ಇಲ್ಲಿನ ಕೃಷಿ ಕೂಲಿಕಾರ್ಮಿಕರು ಪ್ರತಿಭಟನೆ ಮಾಡುತ್ತಿದ್ದೇವೆ. ಹೊಸ ಕೃಷಿ ಕಾಯ್ದೆಗಳು ರೈತರಿಗೆ ಸರ್ಕಾರ ನೆರವು ಕಡಿತ ಮಾಡಲಿದೆ. ಕೃಷಿಯು ಸಂಪೂರ್ಣವಾಗಿ ದಿವಾಳಿಯಾಗಲಿದೆ’ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎನ್.ಶ್ರೀರಾಮಪ್ಪ, ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯೆ ಬಿ.ಸಾವಿತ್ರಮ್ಮ, ಎಂ.ಎನ್.ರಘುರಾಮರೆಡ್ಡಿ, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಅಶ್ವಥ್ಥಪ್ಪ, ವಕೀಲ ಜಯಪ್ಪ, ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ.ಮುಸ್ತಾಫ, ಮುಖಂಡರಾದ ಜಿ.ಕೃಷ್ಣಪ್ಪ, ಕೃಷ್ಣಪ್ಪ, ರಾಮಪ್ಪ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು