ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸುದಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ

Last Updated 2 ಅಕ್ಟೋಬರ್ 2020, 16:52 IST
ಅಕ್ಷರ ಗಾತ್ರ

ಗುಡಿಬಂಡೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪಟ್ಟಣದ ತಾಲ್ಲೂಕು ಕಚೇರಿ ಎದುರು ಐಕ್ಯ ಹೋರಾಟ ಸಮಿತಿ ಸದಸ್ಯರು ಧರಣಿ ನಡೆಸಿದರು.

ಸಿಪಿಎಂ ಪಕ್ಷದ ಎಚ್.ಪಿ.ಲಕ್ಷ್ಮಿನಾರಾಯಣ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡೂ ಸರ್ಕಾರಗಳು ರೈತರ ಹಾಗೂ ಬಡವರ, ಕಾರ್ಮಿಕರ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು, ಅವರನ್ನು ಬೀದಿಗೆ ತಳ್ಳುತ್ತಿದ್ದೆ. ವಿಧಾನಸಭೆಯಲ್ಲಿ ಚರ್ಚೆ ಮಾಡದೇ, ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರುವ ಅಗತ್ಯ ಏನಿತ್ತು ಎಂದರು.

‌ಮೂರು ದಿನಗಳ ಹಿಂದಷ್ಟೆ ರಾಜ್ಯದಾದ್ಯಂತ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ದರೂ, ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾರ್ಮಿಕ ಕಾಯ್ದೆ ತಿದ್ದುಪಡಿ ಜಾರಿ ಮಾಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೂಡಲೇ ಸರ್ಕಾರ ಕಾಯ್ದೆಗಳನ್ನು ವಾಪಸ್‌ ಪಡೆಯದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಗಂಗಪ್ಪ ಮಾತನಾಡಿ, ‘ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟರ ವಿರೋಧಿಯಾಗಿದೆ’ ಎಂದರು.

ಸಿಪಿಎಂ ಪಕ್ಷದ ಜಯರಾಮರೆಡ್ಡಿ, ಆದಿನಾರಾಯಣ, ನಾಗರಾಜು, ರೈತ ಸಂಘದ ಮುಖಂಡರಾದ ವರದರಾಜು, ಶಿವಶಂಕರ, ದಸಂಸ ಸಂಘಟನೆಯ ಇಸ್ಕೂಲಪ್ಪ, ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT