ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೇತಮಂಗಲ | ಪಿಎಸ್ಐ ಆತ್ಮಹತ್ಯೆ: ಆರೋಪಿ ಶಾಸಕನ ಸದಸ್ಯತ್ವ ರದ್ದತಿಗೆ ಆಗ್ರಹ

Published : 6 ಆಗಸ್ಟ್ 2024, 14:20 IST
Last Updated : 6 ಆಗಸ್ಟ್ 2024, 14:20 IST
ಫಾಲೋ ಮಾಡಿ
Comments

ಬೇತಮಂಗಲ: ಯಾದಗಿರಿ ಪಿಎಸ್ಐ ಪರಶುರಾಮ್ ಚಲವಾದಿ ಅವರ ಆತ್ಮಹತ್ಯೆಗೆ ಅವರ ವರ್ಗಾವಣೆ ತಡೆಹಿಡಿಯಲು ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರನ ಒತ್ತಡವೇ ಕಾರಣವಾಗಿದ್ದು, ಈ ಕೂಡಲೇ ಚೆನ್ನಾರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂಬೇಡ್ಕರ್ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ಆಗ್ರಹಿಸಿದ್ದಾರೆ. 

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರವು ಅನೇಕ ಹಗರಣಗಳಷ್ಟೇ ಅಲ್ಲದೆ, ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಪಿಎಸ್ಐ ಪರಶುರಾಮ್ ಅವರನ್ನು ಯಾದಗಿರಿ ನಗರ ಠಾಣೆಯಿಂದ ಸೈಬರ್ ಅಪರಾಧ ಘಟಕ್ಕೆ ವರ್ಗಾವಣೆ ಮಾಡಲಾಗಿತ್ತು. ಅವರ ವರ್ಗಾವಣೆಯನ್ನು ತಡೆ ಹಿಡಿಯಲು ಶಾಸಕ ಚೆನ್ನಾರೆಡ್ಡಿ ಪಾಟೀಲ ಮತ್ತು ಅವರ ಪುತ್ರ ಪಂಪಣ್ಣಗೌಡ ಲಕ್ಷಾಂತರ ರೂಪಾಯಿ ಬೇಡಿಕೆ ಇಟ್ಟಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. 

ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು, ಇದೀಗ ದಲಿತರ ಧ್ವನಿಯನ್ನೇ ದಮನ ಮಾಡಲು ಹೊರಟಿರುವುದು ಸರಿಯಲ್ಲ. ಪಿಎಸ್ಐ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದರು. 

ಈ ವೇಳೆ ಶ್ರೀನಾಥ್ ನಾಸ್ತಿಕ್, ಗೋವಿಂದಪ್ಪ, ಕಣ್ಣೂರು ರಾಜೇಶ್, ಚರಣ್ ಗೌಡ, ಅನುಕುಮಾರ್(ಸಂಜು) ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT