ಚಿಂತಾಮಣಿ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಿಂದ ಸರ್ಕಾರಿ ಪಿಯು ಕಾಲೇಜುಗಳಲ್ಲಿನ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಯ ಮಾಹಿತಿ ಸಂಗ್ರಹಿಸಲು ಹೊರಡಿಸಲಾದ ಸುತ್ತೋಲೆ ಹಿಂಪಡೆಯುವಂತೆ ಒತ್ತಾಯಿಸಿ ಪಿಯು ಕಾಲೇಜುಗಳ ಉಪನ್ಯಾಸಕರ ಸಂಘವು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಶನಿವಾರ ಮನವಿ ಸಲ್ಲಿಸಿದೆ.

ಈ ಕುರಿತು ಪಿಯು ಕಾಲೇಜುಗಳ ಉಪನ್ಯಾಸಕರ ಸಂಘವು ಇತ್ತೀಚೆಗೆ ಪಿಯು ಇಲಾಖೆ ಆಯುಕ್ತರಿಗೂ ಮನವಿ ಸಲ್ಲಿಸಿತ್ತು.

ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮುನಿರೆಡ್ಡಿ ಮಾತನಾಡಿ, ಶಾಲಾ ಶಿಕ್ಷಣ ಇಲಾಖೆಯು ಇತ್ತೀಚೆಗೆ ಪದವಿ ಪೂರ್ವ ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳನ್ನು ಹೊರಡಿಸುತ್ತಿದೆ. ಇದರಿಂದ ದೈನಂದಿನ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮವಾಗಲಿದೆ. ಪಿಯು ಇಲಾಖೆಯ ಈ ಆದೇಶವು ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿದೆ. ಕಾಲೇಜುಗಳ ಭವಿಷ್ಯ ಡೋಲಾಯಮಾನ ಸ್ಥಿತಿಗೆ ತಲುಪುತ್ತಿದೆ. ದೇಶದಲ್ಲಿ ಮಾದರಿಯಾಗಿದ್ದ ಪಿಯು ಶಿಕ್ಷಣ ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪಿಯು ಶಿಕ್ಷಣಕ್ಕೆ ಸಂಬಂಧವೇ ಇಲ್ಲದ ಡಯಟ್ನ ಪ್ರಶಿಕ್ಷಣಾರ್ಥಿಗಳನ್ನು ಪಿಯು ಕಾಲೇಜುಗಳ ಸ್ಥಿತಿಗತಿಗಳ ದತ್ತಾಂಶ ಕ್ರೋಢೀಕರಿಸುವ ನೆಪದಲ್ಲಿ ಕಾಲೇಜುಗಳನ್ನು ಪರಿಶೀಲಿಸಲು ಆದೇಶ ಹೊರಡಿಸಿರುವುದು ದುರಂತವೇ ಸರಿ ಎಂದರು.

ಡಯಟ್ ಪ್ರಶಿಕ್ಷಣಾರ್ಥಿಗಳು ಪಿಯು ಕಾಲೇಜುಗಳ ಪರಿಶೀಲನೆಯ ಆದೇಶ ವಾಪಸ್ ಪಡೆಯಬೇಕು. ಪಿ.ಯು ಉಪನ್ಯಾಸಕರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿ 9 ಮತ್ತು 10ನೇ ತರಗತಿಗೆ ಬೋಧನೆ ಮಾಡುವ ಪ್ರಯತ್ನ ಕೈಬಿಡಬೇಕು. ಈ ಸಂಬಂಧದ ಕಡತಕ್ಕೆ ಶಿಕ್ಷಣ ಸಚಿವರು ಅನುಮೋದನೆ ನೀಡಬಾರದು ಎಂದು ಒತ್ತಾಯಿಸಿದರು.

2024–25ನೇ ಸಾಲಿನ ಪಿಯು ಉತ್ತರಪತ್ರಿಕೆಗಳ ಮೌಲ್ಯಮಾಪನದ ಬಾಕಿ ಇರುವ ₹13.5 ಕೋಟಿ ಕೂಡಲೇ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಿಯು ಶಿಕ್ಷಣದ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗೆ ಅಕಾಡೆಮಿಕ್ ಕೌನ್ಸಿಲ್ ಸಮಿತಿ ರಚಿಸಬೇಕು. ಕೆಪಿಎಸ್ ಶಾಲೆಗಳ ಆಡಳಿತಾತ್ಮಕ ಮತ್ತು ಆರ್ಥಿಕ ಅಧಿಕಾರದ ಜವಾಬ್ದಾರಿಯನ್ನು ಪ್ರಾಂಶುಪಾಲರಿಗೆ ನೀಡಬೇಕು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿರುವ ಪರೀಕ್ಷಾ ವಿಭಾಗವನ್ನು ಪಿಯು ಇಲಾಖೆಗೆ ವರ್ಗಾಯಿಸಬೇಕು. ಸರ್ಕಾರಿ ನೌಕರರಿಗೆ ನೀಡುತ್ತಿರುವ ನಗದು ರಹಿತ ಚಿಕಿತ್ಸೆ ಸೌಲಭ್ಯವನ್ನು ಅನುದಾನಿತ ಕಾಲೇಜುಗಳಿಗೆ ವಿಸ್ತರಿಸಬೇಕು.

2006ರ ಏಪ್ರಿಲ್ ಒಂದರ ನಂತರ ಆಯ್ಕೆಯಾದ ಉಪನ್ಯಾಸಕ ಹಾಗೂ ಸಿಬ್ಬಂದಿಗೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂಬುದು ಪ್ರಮುಖ ಸಂಘದ ಬೇಡಿಕೆಗಳಾಗಿವೆ.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ. ರವೀಂದ್ರ, ‘ಉಪನ್ಯಾಸಕರ ಸಂಘದ ಬೇಡಿಕೆಗಳ ಪಟ್ಟಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು.

ಸಂಘದ ಕಾರ್ಯಾಧ್ಯಕ್ಷ ಎಂ.ಜಿ.ರವಿಚಂದ್ರ, ಪ್ರಧಾನ ಕಾರ್ಯದರ್ಶಿ ಎಚ್.ಬಸವರಾಜು, ಕೋಶಾಧ್ಯಕ್ಷ ನಂಜರೆಡ್ಡಿ ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.

ಕಾಲಿ ಹುದ್ದೆ ಭರ್ತಿಗೆ ಒತ್ತಾಯ

ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕಾಲಿ ಇರುವ ಉಪನ್ಯಾಸಕರು ಪ್ರಾಂಶುಪಾಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಡಿ ಗ್ರೂಪ್ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಬೇಕು ಎಂದು ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮುನಿರೆಡ್ಡಿ ಸರ್ಕಾರಕ್ಕೆ ಒತ್ತಾಯಿಸಿದರು. ಪಿಯು ಶಿಕ್ಷಣದ ಉಪನಿರ್ದೇಶಕರ ಕಚೇರಿ ಬಲವರ್ಧನೆಗೆ ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ನಿಯೋಜಿಸಬೇಕು. ಅವರಿಂದ ಪಿಯು ಪರೀಕ್ಷೆ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತೇಜಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.