ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ 75.80 ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 11ನೇ ಸ್ಥಾನಕ್ಕೆ ಭಾಜನವಾಗಿದೆ.

ಕಳೆದ ವರ್ಷ ಶೇ 82.84 ಫಲಿತಾಂಶದ ಮೂಲಕ 18ನೇ ಸ್ಥಾನ ಪಡೆದಿತ್ತು. ಈ ಬಾರಿ ಫಲಿತಾಂಶ ಕಡಿಮೆಯಾಗಿದೆ. ಸ್ಥಾನದಲ್ಲಿಯೂ ಮೇಲಕ್ಕೇರಿದೆ.

ಜಿಲ್ಲೆಯಲ್ಲಿ ಒಟ್ಟು 12,490 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆ ಬರೆದಿದ್ದರು. ಇವರಲ್ಲಿ 9,468 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 75.80ರಷ್ಟು ಫಲಿತಾಂಶ ಜಿಲ್ಲೆಗೆ ದೊರೆತಿದೆ.

ವಿಭಾಗಾವಾರು ಫಲಿತಾಂಶ: ಕಲಾ ವಿಭಾಗದಲ್ಲಿ ಮೊದಲ ಬಾರಿಗೆ 1,194 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 549 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 45.98ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 5,115 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 3,780 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 73.9 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 6,181 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 5,139 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 83.14ರಷ್ಟು ಫಲಿತಾಂಶ ಬಂದಿದೆ.

ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ: ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ನಗರ ಪ್ರದೇಶದ 9,032 ವಿದ್ಯಾರ್ಥಿಗಳ ಪೈಕಿ 6,688 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 74.05ರಷ್ಟು ಫಲಿತಾಂಶ ಪಡೆದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಬರೆದ 3,458 ವಿದ್ಯಾರ್ಥಿಗಳ ಪೈಕಿ 2,780 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 80.39ರಷ್ಟು ಫಲಿತಾಂಶ ಪಡೆದಿದ್ದಾರೆ.

ಟಾಪರ್ಗಳಿವರು: ಚಿಕ್ಕಬಳ್ಳಾಪುರದ ಅಗಲಗುರ್ಕಿಯ ಬಿ.ಜಿ.ಎಸ್ ಪಿ.ಯು. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಯಶಸ್ಗೌಡ ಎನ್. 600ಕ್ಕೆ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸಚಿನ್ ಪಿ. 600ಕ್ಕೆ 595 ಅಂಕಗಳನ್ನು ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ.

ಕಲಾವಿಭಾಗದಲ್ಲಿ ಗೌರಿಬಿದನೂರು ತಾಲ್ಲೂಕು ತೊಂಡೇಬಾವಿಯ ಎವಿಎನ್ಆರ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸುಪ್ರಿತಾ ಬಿ.ಎಂ. 600ಕ್ಕೆ 575 ಅಂಕಗಳನ್ನು ಪಡೆಯುವ ಮೂಲಕ ಈ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.