ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಲ್ಸ್ ಪೋಲಿಯೊ: ಪ್ರಚಾರ ನೀಡಿ

ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊ ಕಾರ್ಯಪಡೆ ಸಮಿತಿ ಸಭೆ
Last Updated 9 ಜನವರಿ 2020, 15:31 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಜನವರಿ 19 ರಂದು ನಡೆಯುವ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಜತೆಗೆ ಈ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಈ ಅಭಿಯಾನವನ್ನು ಅಧಿಕಾರಿಗಳು ಯಶಸ್ವಿಗೊಳಿಸಲು, ನಿಷ್ಠೆ ಹಾಗೂ ಇಚ್ಛಾ ಶಕ್ತಿಯಿಂದ ಕೆಲಸ ಮಾಡಬೇಕು. ಪೋಲಿಯೊ ಕಾರ್ಯಕ್ರಮ ಕುರಿತು ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿ ಪ್ರದೇಶದಲ್ಲಿ ಧ್ವನಿವರ್ಧಕ ಹಾಗೂ ಡಂಗುರದ ಮೂಲಕ ವ್ಯಾಪಕ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಜತೆಗೆ ಶಾಲಾ ವಿದ್ಯಾರ್ಥಿಗಳಿಂದ ಜಾಥಾ ಸೇರಿದಂತೆ ಹಲವಾರು ಜಾಗೃತಿ ಕಾರ್ಯಕ್ರಮಗಳು ಹಮ್ಮಿಕೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎಂ.ಯೋಗೇಶ್‌ ಗೌಡ ಮಾತನಾಡಿ, ‘ಜನವರಿ 19 ರಂದು ಪೋಲಿಯೊ ಬೂತ್‌ಗಳಲ್ಲಿ ಹನಿ ಹಾಕಲಾಗುತ್ತದೆ. ನಂತರ ಎರಡರಿಂದ ಮೂರು ದಿನಗಳು ಮನೆ ಮನೆಗೆ ಭೇಟಿ ನೀಡುವ ಮೂಲಕ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುತ್ತದೆ‘ ಎಂದು ಹೇಳಿದರು.

‘ನೆರೆಯ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ಕಂಡು ಬಂದಿರುವುದರಿಂದ ವಲಸಿಗರ ಮೂಲಕ ನಮ್ಮ ದೇಶಕ್ಕೆ ಹರಡುವ ಸಾಧ್ಯತೆ ಇದೆ. ಆದ್ದರಿಂದ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT