ಬುಧವಾರ, ಜನವರಿ 20, 2021
24 °C

ಪಂಪ್‌ -ಮೋಟಾರ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ‘ಇನ್ನೇನು ಕೆಲವೇ ತಿಂಗಳುಗಳಲ್ಲಿ ನಮ್ಮ ತಾಲ್ಲೂಕಿನ ಕೆರೆಗಳಿಗೆ ನೀರು ಹರಿದು ಬರಲಿದೆ. ಅದರಿಂದ ಅಂತರ್ಜಲ ವೃದ್ಧಿಯಾಗಲಿದೆ. ಕೊಳವೆಬಾವಿಗಳಲ್ಲಿಯೂ ನೀರು ತುಂಬಲಿದ್ದು, ರೈತರಿಗೆ ವರದಾನವಾಗಲಿದೆ’ ಎಂದು ಶಾಸಕ ವಿ. ಮುನಿಯಪ್ಪ ತಿಳಿಸಿದರು.

ಶಿಡ್ಲಘಟ್ಟದ ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಪಂಪ್‌ -ಮೋಟಾರ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ರೈತರಿಗೆ ಕೃಷಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೊಳಿಸಿದೆ. ಸರ್ಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದರು.

ಮಾರುಕಟ್ಟೆಯಲ್ಲಿ ಸಾವಿರಾರು ರೂಪಾಯಿ ಸುರಿದು ಪಂಪ್, ಮೋಟಾರ್ ಮತ್ತು ಪೈಪ್‌ಗಳನ್ನು ಕೊಂಡುಕೊಳ್ಳಲಾಗದ ಬಡರೈತರನ್ನು ಗುರುತಿಸಿ ಸರ್ಕಾರ ಪ್ರತಿವರ್ಷ ಫಲಾನುಭವಿ ರೈತರಿಗೆ ಉಚಿತವಾಗಿ ಪಂಪ್, ಮೋಟಾರ್, ಪೈಪ್‌ ಮತ್ತು ಕೇಬಲ್‌ಗಳನ್ನು ನೀಡುತ್ತಿದೆ. ಈ ಬಾರಿಯೂ ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ಉಚಿತ ಪಂಪ್‌ಸೆಟ್ ಹಾಗೂ ಪರಿಕರಗಳನ್ನು ನೀಡುತ್ತಿದ್ದು, ರೈತರು ಸದುಪಯೋಗಪಡಿಸಿ ಕೊಳ್ಳುವಂತೆ ಹೇಳಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು, ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿ ರೈತರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.