ತಹಶೀಲ್ದಾರ್ ಮಹೇಶ್ ಪತ್ರಿ ಮಾತನಾಡಿ, ‘ಜನವರಿಯಿಂದ ಸೆಪ್ಟೆಂಬರ್‌ವರೆಗೆ ತಾಲ್ಲೂಕಿನಲ್ಲಿ 2,500 ನಾಯಿ ಕಚ್ಚಿದ ಪ್ರಕರಣ ದಾಖಲಾಗಿವೆ. ಮನೆಗಳಲ್ಲಿ ಸಾಕಿರುವ ನಾಯಿಗಳಿಗೂ ಸಹ ಕಾಲ ಕಾಲಕ್ಕೆ ಚುಚ್ಚುಮದ್ದನ್ನು ಹಾಕಿಸಬೇಕು. ಎಲ್ಲ ಇಲಾಖೆಗಳ ಸಮನ್ವಯತೆಯೊಂದಿಗೆ, ರೇಬಿಸ್, ಚಿಕನ್‌ಗುನ್ಯಾ, ಮಲೇರಿಯಾ, ಮಿದುಳು ಜ್ವರ ತಡೆಗಟ್ಟಬಹುದು’ ಎಂದರು.