ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ರಾಗಿಯು 47,748 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹೀಗೆ ದೊಡ್ಡ ಪ್ರಮಾಣದಲ್ಲಿ ರಾಗಿ ಬಿತ್ತನೆಯಾಗಿದೆ. ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು
ಮಾಡುತ್ತಿದ್ದಾರೆ.

ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ₹ 3,500ರಿಂದ ₹ 4,000 ಬಾಡಿಗೆ ದರ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ₹ 2,800 ಮೀರದಂತೆ ಬಾಡಿಗೆ ನಿಗದಿಪಡಿಸಿದೆ. ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.