ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮೇನಹಳ್ಳಿಯಲ್ಲಿ ಮಳೆ

Last Updated 29 ಮೇ 2020, 16:47 IST
ಅಕ್ಷರ ಗಾತ್ರ

ಗುಡಿಬಂಡೆ: ಸೋಮೇನಹಳ್ಳಿ ಭಾಗದಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಸುಮಾರು 26 ಮಿ.ಮೀ. ಮಳೆಯಾಗಿದೆ.

ಸೋಮೇನಹಳ್ಳಿಯಲ್ಲಿ ಚರಂಡಿಗಳು ಕಟ್ಟಿಕೊಂಡಿದ್ದರಿಂದ ಮಳೆ ನೀರು ರಸ್ತೆ ಮೇಲೆ ಹರಿಯಿತು. ಇದರಿಂದ ಚರಂಡಿಗಳಲ್ಲಿದ್ದ ತ್ಯಾಜ್ಯ ರಸ್ತೆ ಮೇಲೆ ಚೆಲ್ಲಾಡಿತು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢಶಾಲೆ ಆವರಣದಿಂದ ನೀರು ಹೆಚ್ಚಾಗಿ ಬಂದು ಸಿಮೆಂಟ್ ರಸ್ತೆ ಮೇಲೆ ಹರಿಯಿತು. ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಕಲ್ಯಾಣಿಗೆ ಸ್ವಲ್ಪ ಮಟ್ಟಿಗೆ ನೀರು ಬಂದಿದೆ.

ಸೋಮೇನಹಳ್ಳಿ ಹೋಬಳಿ ವ್ಯಾಪ್ತಿಯ ಸೋಮೇಶ್ವರ, ಗೆಗ್ಗಿಲರಾಳ್ಳಹಳ್ಳಿ, ಮದ್ದರೆಡ್ಡಿಹಳ್ಳಿ, ವೀರರಾವುತನಹಳ್ಳಿ, ದಿನ್ನೇಮೇಲಿನಹಳ್ಳಿ, ಚಿಂತಕಾಯಲಹಳ್ಳಿ ಮುಂತಾದ ಗ್ರಾಮಗಳಲ್ಲಿ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT